Publish Date: Sat, 21 May 2022 (19:56 IST)
Updated Date: Sat, 21 May 2022 (19:58 IST)
ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 8 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಧಾರವಾಡದಲ್ಲಿ ನಡೆದಿದೆ.ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದು, 6 ಜನರ ಸ್ಥಿತಿ ಗಂಭೀರವಾಗಿದೆ..ನಿಗದಿ ಗ್ರಾಮದ ಯುವಕನ ನಿಶ್ಚಿತಾರ್ಥ ಮುಗಿಸಿಕೊಂಡು ಬೆನಕಟ್ಟಿಗೆ ವಾಪಸ್ ಬರುವಾಗ ಈ ಅನಾಹುತ ಸಂಭವಿಸಿದ್ದು, ಅನನ್ಯಾ, ಹರೀಶ್, ಶಿಲ್ಪಾ, ನೀಲವ್ವ, ಮಧುಶ್ರೀ, ಮಹೇಶ್ವರಯ್ಯ, ಶಂಭುಲಿಂಗಯ್ಯ ಮೃತ ದುರ್ದೈವಿಗಳಾಗಿದ್ದಾರೆ..ಕ್ರೂಸರ್ ಚಾಲಕನ ಅಜಾಗರೂಕತೆಯೇ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ..ಸಂಭ್ರಮದ ಬದಲಿಗೆ ಮದುವೆ ನಡೆಯಬೇಕಾದ ಸ್ಥಳದಲ್ಲಿ ಸ್ಮಶಾನದ ಮೌನ ಆವರಿಸಿದೆ. ಅಪಘಾತ ಸ್ಥಳಕ್ಕೆ ಎಸ್ಪಿ ಕೃಷ್ಣಕಾಂತ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.