Publish Date: Wed, 20 Dec 2023 (14:00 IST)
Updated Date: Wed, 20 Dec 2023 (12:16 IST)
ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ.ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ.ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂ, ಚಾಲಕ ಸ್ಥಳದಲ್ಲೆ ಸಾವನಾಪ್ಪಿದ್ದಾನೆ.
ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ಘಟನೆ ನಡೆದಿದೆ.ಸಂತೋಷ್ ಸಾವನ್ನಪ್ಪಿದ ಯುವಕನಾಗಿದ್ದು,ಅಮೆಜಾನ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡ್ತಿದ್ದ .ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.