Webdunia - Bharat's app for daily news and videos

Install App

ಹಸೆಮಣೆ ಏರಬೇಕಿದ್ದ ಜೋಡಿಯ ದುರಂತ ಅಂತ್ಯ

Webdunia
ಸೋಮವಾರ, 12 ಜೂನ್ 2023 (15:09 IST)
ಮದುವೆಯಾಗ ಬೇಕಾಗಿದ್ದ ಜೋಡಿ ಗ್ಯಾಸ್ ಗೀಸರ್ ಸೋರಿಕೆಯಾದ ಪರಿಣಾಮ ಬಾತ್ ರೂಮ್ ನಲ್ಲಿ ಸಾವನಪ್ಪಿದ ಘಟನೆ ಬೆಂಗಳೂರಿನ ಚಿಕ್ಕಜಾಲದ ತರಬನಹಳ್ಳಿಯಲ್ಲಿ ನಡೆದಿದೆ. ಗುಂಡ್ಲುಪೇಟೆ ಮೂಲದ ಚಂದ್ರಶೇಖರ್ ಹಾಗೂ ಗೋಕಾಕ್​​ನ ಸುಧಾರಾಣಿ ಮೃತ ದುರ್ವೈವಿಗಳು. ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಈ ಜೋಡಿ ದುರಂತ ಅಂತ್ಯ ಕಂಡಿದೆ. ಜೂನ್ 10ರಂದು ಈ ದುರ್ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಬ್ಬರೂ ನಂದಿಹಿಲ್ಸ್ ಬಳಿಯ ಗಾಲ್ಪ್ ಹೋಟೆಲ್ ನಲ್ಲಿ ಒಟ್ಟಿಗೆ ಕೆಲಸ ಮಾಡಿಕೊಂಡಿದ್ದರು. ಅಲ್ಲದೇ ಇಬ್ಬರು ಮದುವೆಯಾಗಲು ತಯಾರಿ ನಡೆಸಿದ್ರು. ಆದ್ರೆ, ಹೊಸ ಜೀವನ ಆರಂಭಿಸಬೇಕೆನ್ನುವಷ್ಟರಲ್ಲೇ ವಿಧಿ ಬಿಟ್ಟಿಲ್ಲ. ಮದುವೆಗೆ ಮುಂಚೆಯೇ ಜೋಡಿ ಮಸಣ ಸೇರಿದೆ. ತರಬನಹಳ್ಳಿಯಲ್ಲಿ ವಾಸವಿದ್ದ ಚಂದ್ರಶೇಖರ್ ಬಾಡಿಗೆ ಮನೆಗೆ ಜೂನ್ 10ರಂದು ಸಂಜೆ ಸುಧಾರಾಣಿ ಆಗಮಿಸಿದ್ದಳು. ರಾತ್ರಿ ಸ್ನಾನಕ್ಕೆಂದು ಗ್ಯಾಸ್​ ಗೀಸರ್​ ಆನ್ ಮಾಡಿ ಬಾತ್​ರೂಮ್​ಗೆ ಹೋಗಿದ್ದಾರೆ. ದುರದೃಷ್ಟವಶಾತ್ ಆ ವೇಳೆ ಗ್ಯಾಸ್​ ಗೀಸರ್​ನಿಂದ ವಿಷಾನಿಲ ಸೋರಿಕೆಯಾಗಿದೆ. ಇದರಿಂದ ಸ್ನಾನ ಮಾಡುತ್ತಿರುವಾಗಲೇ ಉಸಿರುಗಟ್ಟಿ ಬಾತ್​ರೂಮ್​ನ್ಲಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬಳಿಕ ಮನೆಯಿಂದ ಹೊರಗೆ ಬಾರದೆ ಇದ್ದಾಗ ಬೆಳಗ್ಗೆ ಮನೆ ಮಾಲೀಕ ಅನುಮಾನಗೊಂಡು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಮನೆ ಮಾಲೀಕ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದು, ಈ ಬಗ್ಗೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments