Select Your Language

Notifications

webdunia
webdunia
webdunia
webdunia

ಶಾಲಾ ಮಕ್ಕಳಿದ್ದ ಬಸ್ ಮೇಲೆ ಉರುಳಿದ ಮರ; ಮುಂದೇನಾಯ್ತು?

ಶಾಲೆ
ಶಾಲೆಯ ಬಸ್ ವೊಂದರ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿಬಿದ್ದ ಘಟನೆ ನಡೆದಿದೆ.

ಶಾಲಾ ಬಸ್‌ ಮೇಲೆ ಮರ ಬಿದ್ದ ಘಟನೆ ಮಂಗಳೂರಿನ ನಂತೂರು ವೃತ್ತದ ಬಳಿ ನಡೆದಿದೆ. ಪಂಪ್ ವೆಲ್ ಕಡೆಯಿಂದ ಬರುತ್ತಿದ್ದ ಕೇಂಬ್ರಿಡ್ಜ್ ಶಾಲೆಯ ವಾಹನದ ಮೇಲೆ ನಂತೂರು ಜಂಕ್ಷನ್ ನ ನೀರುಮಾರ್ಗ ರಸ್ತೆಯಲ್ಲಿ ಮಿನಿ ಬಸ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ‌. ಬಸ್ ನಲ್ಲಿ 17 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು.

ಘಟನೆಗೆ ಸಂಬಂಧಿಸಿ  ಶಾಲೆಯ ಪ್ರಾಂಶುಪಾಲರು ಮಾತನಾಡಿದ್ದು, ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಅಂತ ತಿಳಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ಮತ್ತು ಮಂಗಳೂರು ತಹಶೀಲ್ದಾರ್ ಭೇಟಿ ನೀಡಿದ್ದರು. ಶಾಲಾ ಮಕ್ಕಳಿಗೆ ಪರ್ಯಾಯ ವಾಹನ ವ್ಯವಸ್ಥೆ ಕಲ್ಪಿಸಿದ್ರು.




Share this Story:

Follow Webdunia kannada

ಮುಂದಿನ ಸುದ್ದಿ

ರೋಡಿಗೆ ಬಂದ ಅನರ್ಹ ಶಾಸಕ ಮಾಡಿದ್ದೇನು?