Webdunia - Bharat's app for daily news and videos

Install App

ಯುವಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

Webdunia
ಸೋಮವಾರ, 5 ಜೂನ್ 2023 (19:00 IST)
ಹುಬ್ಬಳ್ಳಿಯ ಕಲಘಟಗಿಯಲ್ಲಿ ಹಸೆಮಣೆ ಏರಬೇಕಿದ್ದ ನಿಂಗಪ್ಪ ನವಲೂರ ಎನ್ನುವ ಯುವಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಜೂನ್ 7ರಂದು ಮದುವೆಯಾಗಬೇಕಿದ್ದ ಯುವಕನ ಹತ್ಯೆ ಪ್ರಕರಣವನ್ನು ಕಲಘಟಗಿ ಪೊಲೀಸರು ಘಟನೆ ನಡೆದ 48 ಗಂಟೆಗಳಲ್ಲಿ ಭೇದಿಸಿದ್ದಾರೆ. ವಿವಾಹಿತೆ ಜೊತೆಗಿನ ಅನೈತಿಕ ಸಂಬಂಧವೇ ಕೊಲೆಗೆ ಕಾರಣ ಎಂದು ಪೊಲೀಸ್​ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಗಪ್ಪ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಪತಿ ಹಾಗೂ ಆತನ ಸಹೋದರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೂನ್ 7ರಂದು ತಾವರಗೆರೆ ಗ್ರಾಮದ ಯುವತಿ ಜೊತೆ ಮದುವೆ ನಿಶ್ಚಯವಾಗಿತ್ತು. ಆದ್ರೆ, ಮದುವೆಗೆ ಐದು ದಿನಗಳ ಮುಂಚೆ ನಿಂಗಪ್ಪ ತೋಟದ ಮನೆಯಲ್ಲಿ ಕೊಲೆಯಾಗಿದ್ದ. ಕಲಘಟಗಿ ತಾಲೂಕಿನ ಜಿನ್ನೂರು ಗ್ರಾಮದ ತೋಟದ ಮನೆಯಲ್ಲಿ ಮಧ್ಯರಾತ್ರಿ ನಿಂಗಪ್ಪನ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಇನ್ನೇನು ಐದೇ ದಿನದಲ್ಲಿ ಮದುವೆಯಾಗಿ ಹೊಸ ಜೀವನ ಆರಂಭಿಸಬೇಕಿದ್ದ ನಿಂಗಪ್ಪ ಮಸಣ ಸೇರಿದ್ದ. ಇದರಿಂದ ಮದುವೆ ಮನೆಯಲ್ಲಿ ನೀರವ ಮೌನ ಆವರಿಸಿತ್ತು. ಹತ್ಯೆಗೆ ಅನೈತಿಕ ಸಂಬಂಧವೇ ಕಾರಣ ಎಂದು ತಿಳಿದುಬಂದಿದೆ. ಅಲ್ಲದೇ ಕೊಲೆ ಆರೋಪಿಗಳಾದ ಮಹಿಳೆಯ ಗಂಡ ಮುತ್ತಪ್ಪ ಹಾಗೂ ಆತನ ಸಹೋದರ ವೀರಭದ್ರ ಜಾಲಿಹಾಳ ಎನ್ನುವಾತನನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments