Select Your Language

Notifications

webdunia
webdunia
webdunia
webdunia

ಮತ ಜಾಗೃತಿ ಕುರಿತು ಕಾಲ್ನಡಿಗೆ ಜಾಥ ಹಾಗೂ ಬೀದಿ ನಾಟಕ ಕಾರ್ಯಕ್ರಮ

ಮತ ಜಾಗೃತಿ ಕುರಿತು ಕಾಲ್ನಡಿಗೆ ಜಾಥ ಹಾಗೂ ಬೀದಿ ನಾಟಕ ಕಾರ್ಯಕ್ರಮ
bangalore , ಶನಿವಾರ, 22 ಏಪ್ರಿಲ್ 2023 (18:50 IST)
ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಅಂಗವಾಗಿ ದಕ್ಷಿಣ ವಲಯದ ಲಾಲ್ ಬಾಗ್ ಪೂರ್ವ ದ್ವಾರದ ಬಳಿ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥ ಕಾರ್ಯಕ್ರಮಕ್ಕೆ ಹಣಕಾಸು ವಿಭಾಗದ ವಿಶೇಷ ಆಯುಕ್ತರು ಹಾಗೂ ವಲಯ ಆಯುಕ್ತರಾದ  ಜಯರಾಮ್ ರಾಯಪುರ ರವರು ಚಾಲನೆ ನೀಡಿದರು.
 
ಜಾಥ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು,  ಮತದಾನದ ಪ್ರಮಾಣವು ಶೇ.‌ 52 ರಷ್ಟಿದ್ದು, ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಮತದಾನ ಪ್ರಮಾಣವನ್ನು ಶೇ. 60 ಆಗಬೇಕೆಂಬ ಉದ್ದೇಶದಿಂದ ಸಾಕಷ್ಟು ಮತದಾರರ ಜಾಗೃತಿ ಅಭಿಯಾನಗಳನ್ನು ಮಾಡಲಾಗುತ್ತಿದೆ. ಅದರ ಭಾಗವಾಗಿ ಇಂದು ಲಾಲ್ ಬಾಗ್ ನಲ್ಲಿ ಬರುವ ವಾಯುವಿಹಾರಿಗಳಲ್ಲಿ ಮತದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾಲ್ನಡಿಗೆ ಜಾಥವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
 
ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ ಮಾಡಬೇಕು. ದಕ್ಷಿಣ ವಲಯದ ವಿಜಯ ಕಾಲೇಜಿನಲ್ಲಿ ಸುಮಾರು 500 ಯುವ ಮತದಾರರಿದ್ದು, ಕಾಲೇಜಿಗೆ ತೆರಳಿ ಮತದಾನದ ದಿನದ ತಪ್ಪದೆ ಮತದಾನ ಮಾಡಲು ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು. ಇನ್ನೂ ಮೇ 10 ರವರೆಗೂ ಎಲ್ಲಾ ಕಾಲೇಜು, ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ ಮತದಾನ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು‌.
 
ಲಾಲ್ ಬಾಗ್ ಪೂರ್ವ ದ್ವಾರ ದಿಂದ ಲಾಬ್ ಉದ್ಯಾನದೊಳಗೆ ಸಾಗಿ ಲಾಲ್ ಬಾಗ್ ಪಶ್ಚಿಮದ್ವಾರದವರೆಗೆ ತೆರಳಿ ಕಾಲ್ನಡಿಗೆ ಜಾಥವನ್ನು ಮುಕ್ತಾಯಗೊಳಿಸಲಾಯಿತು.
 
ಲಾಲ್ ಬಾಗ್ ಉದ್ಯಾನವನದಲ್ಲಿ ವಾಯುವಿಹಾರಕ್ಕೆ ಬಂದಂತಹ ನಾಗರಿಕರಲ್ಲಿ ಮತದಾನದ ದಿನವಾದ ಮೇ. 10 ರಂದು ತಪ್ಪದೆ ಮತದಾನ ಮಾಡಲು ಜಾಗೃತಿ ಮೂಡಿಸಲಾಯಿತು. ಜೊತೆಗೆ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸಿಲಾಯಿತು‌.
 
ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಹಿನ್ನೆಲೆ ಹಾಸ್ಯ ನಟರಾದ ರಮಾನಂದ ರವರ ಗೆಜ್ಜೆ ಹೆಜ್ಜೆ ರಂಗತಂಡದಿಂದ ಬೀದಿ ನಾಟಕದ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
 
ಈ ವೇಳೆ ವಲಯ ಜಂಟಿ ಆಯುಕ್ತರು ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿಯಾದ ಡಾ. ಜಗದೀಶ್ ಕೆ. ನಾಯಕ್, ಸ್ವೀಪ್ ನೋಡಲ್ ಅಧಿಕಾರಿಯಾದ ಸಿದ್ದೇಶ್ವರ್, ಉಪ ಆಯುಕ್ತರಾದ ಲಕ್ಷ್ಮೀ ದೇವಿ, ಕಂದಾಯ ಅಧಿಕಾರಿಗಳು, ಎನ್.ಸಿ.ಸಿ ವಿದ್ಯಾರ್ಥಿಗಳು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಬಿಗಿ ಬಂದೋಬಸ್ತ್