Webdunia - Bharat's app for daily news and videos

Install App

ಉದ್ಯೋಗ ಮೇಳಕ್ಕೆ 75,000 ಆಕಾಂಕ್ಷಿಗಳಿಂದ ಹೆಸರು ನೋಂದಣಿ

geetha
ಸೋಮವಾರ, 26 ಫೆಬ್ರವರಿ 2024 (19:41 IST)
ಬೆಂಗಳೂರು- ಪಿಯುಸಿ, ಪದವಿ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ಮೇಳದಲ್ಲಿ ಒಂದು ಲಕ್ಷ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಸೋಮವಾರದಿಂದ ಆರಂಭವಾಗಿರುವ ಯುವ ಸಮೃದ್ಧಿ ಬೃಹತ್ ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
 
75 ಸಾವಿರ ಮಂದಿ ನೋಂದಾಣಿಯಾಗಿರುವುದು ದೇಶದಲ್ಲೇ ಐತಿಹಾಸಿಕ ದಾಖಲೆ. ಎಸ್ಸೆಸ್ಸೆಲ್ಸಿಯಿಂದ ಸ್ನಾತಕೋತ್ತರದವರೆಗೂ ವಿವಿಧ ವಿದ್ಯಾರ್ಹತೆಗಳನ್ನು ಹೊಂದಿರುವವರು ಮೇಳದಲ್ಲಿ ಭಾಗವಹಿಸಿದ್ದಾರೆ. ಒಂದು ಲಕ್ಷ ಉದ್ಯೋಗಗಳ ನೇಮಕಾತಿಗೆ ಖಾಸಗಿ ಕಂಪನಿಗಳು ಮುಂದೆ ಬಂದಿವೆ. ಇದು ದಾಖಲೆಯೇ ಸರಿ ಎಂದು ಪಾಟೀಲ್ ಪ್ರಶಂಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಯುವ ಸಮೃದ್ಧಿ ಸಮ್ಮೇಳನ ಮತ್ತು ಉದ್ಯೋಗ ಮೇಳವನ್ನು ಸಿಎಂ‌ ಸಿದ್ದರಾಮಯ್ಯ ಉದ್ಘಾಟಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments