ಜಾಗತಿಕವಾಗಿ ಸವಾಲಾಗಿರುವ ಕೊರೊನಾ ಮಹಾಮಾರಿಯಿಂದಾಗಿ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮಹಿಳೆಯ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಇದರಿಂದ ತೀವ್ರವಾಗಿ ಖಿನ್ನತೆಗೆ ಒಳಗಾಗಿದ್ದ ಮಹಿಳೆ ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮುಂಬೈನ ನಾಯರ್ ಹಾಸ್ಪಿಟಲ್ ನಲ್ಲಿ ಈ ಘಟನೆ ನಡೆದಿದ್ದು, ಕೊರೊನಾ ಪಾಸಿಟಿವ್ ಬಂದಿದ್ದರಿಂದಾಗಿ ಮಹಿಳೆ ತೀವ್ರವಾಗಿ ಖಿನ್ನತೆಗೆ ಒಳಗಾಗಿ ಮನನೊಂದಿದ್ದಳು.
ಕೊರೊನಾ ವೈರಸ್ ನಿರ್ಮೂಲನೆಗೆ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಮಹಿಳೆಗೆ ದುಡುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.