Select Your Language

Notifications

webdunia
webdunia
webdunia
webdunia

ಗೃಹಲಕ್ಷ್ಮಿಗೆ ವರ್ಷದ ಸಂಭ್ರಮ: ‌ಸ್ಪೂರ್ತಿಯುತ ಕಥೆಗಳನ್ನು ಹಂಚಿ ಖುಷಿಪಟ್ಟ ಸಿದ್ದರಾಮಯ್ಯ

Congress Govt Grilakshmi Yojana

Sampriya

ಬೆಂಗಳೂರು , ಭಾನುವಾರ, 1 ಸೆಪ್ಟಂಬರ್ 2024 (12:15 IST)
ಬೆಂಗಳೂರು: ರಾಜ್ಯದ ಕಾಂಗ್ರೆಸ್‌ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಈಗ ವರ್ಷದ ಸಂಭ್ರಮ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಯ ಫಲಾನುಭವಿಗಳ ಸ್ಪೂರ್ತಿಯುತ ಕಥೆಗಳನ್ನು ಹಂಚಿಕೊಂಡು ಖುಷಿಪಟ್ಟಿದ್ದಾರೆ.

ನಾಡಿನ ನನ್ನ ಅಕ್ಕತಂಗಿಯರ, ತಾಯಂದಿರ ಕುಟುಂಬ ನಿರ್ವಹಣೆಯ ಹೊರೆಯನ್ನು ತಗ್ಗಿಸಿ, ಅವರಿಗೆ ನೆಮ್ಮದಿಯ ಬದುಕು ಕಟ್ಟಿಕೊಡಲು ರೂಪಿಸಿದ ಗೃಹಲಕ್ಷ್ಮಿ ಯೋಜನೆ ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಯೋಜನೆಯ ಪೂರ್ಣ ಸದುಪಯೋಗ ಪಡೆದು ನವ ಉತ್ಸಾಹದಿಂದ ಹೊಸ ಬದುಕಿನತ್ತ ಹೆಜ್ಜೆಹಾಕುತ್ತಿರುವ ಫಲಾನುಭವಿ ಮಹಿಳೆಯರ ಯಶೋಗಾಥೆಯಿವು. ಬೆರಳೆಣಿಕೆಯಷ್ಟು ಮಾತ್ರ ಬೆಳೆಕಿಗೆ ಬಂದಿವೆ, ಸುದ್ದಿಯಾಗದ ಲಕ್ಷಾಂತರ ಕತೆಗಳಿವೆ. ಈ ಎಲ್ಲವೂ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಾಗಿದೆ ಎಂದು ಅವರು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.

ವಿದ್ಯಾಭ್ಯಾಸಕ್ಕೆ ನೆರವಾದ ಗೃಹಲಕ್ಷ್ಮಿ ಹಣ, ಹಾವೇರಿಯ ಮಹಿಳೆಯೊಬ್ಬರು ಸೊಸೆಗೆ ಫ್ಯಾನ್ಸಿ ಸ್ಟೋರ್‌ ತೆರೆದ ಕಥೆ, ವೃದ್ದೆಯೊಬ್ಬರು ಗೃಹಲಕ್ಷ್ಮಿ ಹಣದಿಂದ ಹೋಳಿಗೆ ಊಟ ಹಾಕಿಸಿದ ಸಂದರ್ಭ... ಹೀಗೆ ಹಣ ಸದುಪಯೋಗವಾದ ಕುರಿತ ಉದಾಹರಣೆಗಳನ್ನು ಅವರು ಹಂಚಿಕೊಂಡಿದ್ದಾರೆ.

2023ರ ಆ.30 ರಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿತ್ತು. ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಇದು ಪ್ರಮುಖವಾದುದು. ಪ್ರತಿ ತಿಂಗಳು ₹2 ಸಾವಿರ ಹಣವನ್ನು ಕುಟುಂಬದ ಯಜಮಾನಿಗೆ ನೀಡುವ ಯೋಜನೆ ಇದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,000 ಕೋಟಿ ಅನುದಾನ ಹಂಚಿಕೆ: ಪ್ರಧಾನಿ ನರೇಂದ್ರ ಮೋದಿ