Select Your Language

Notifications

webdunia
webdunia
webdunia
webdunia

ಮನೆ ಮೇಲಿಂದ ಬಿದ್ದು ಯುವಕ ಸಾವು

A young man died after falling from the house
bangalore , ಗುರುವಾರ, 29 ಡಿಸೆಂಬರ್ 2022 (20:07 IST)
ಬೆಂಗಳೂರಿನಲ್ಲಿ ಮನೆಯ ಮೇಲಿಂದ ಬಿದ್ದು ವಿಧ್ಯಾರ್ಥಿ ಸಾವನಪ್ಪಿದ್ದಾನೆ. ಪವನ್ ಸಾವನ್ನಪ್ಪಿರೋ ವಿದ್ಯಾರ್ಥಿ. ಸುಬ್ರಮಣ್ಯ ನಗರದಲ್ಲಿ ಈ ಘಟನೆ ನಡೆದಿದೆ. ಬೆಳಗಿನ ಜಾವ 4.30ರ ಸುಮಾರಿಗೆ ಮನೆಯ ಮೇಲಿಂದ ಬಿದ್ದು ವಿದ್ಯಾರ್ಥಿ ಸಾವನಪ್ಪಿದ್ದಾನೆ. ಸ್ಥಳಕ್ಕೆ ಸುಬ್ರಮಣ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪವನ್​​​ ನಿನ್ನೆ ಸಂಜೆ ಕಾಲೇಜಿನಿಂದ ಹೆಗ್ಗನಹಳ್ಳಿ ಮನೆಗೆ ಬಂದಿದ್ದ. ಮನೆಯಲ್ಲಿ ಬ್ಯಾಗ್ ಇಟ್ಟು ಮಿಲ್ಕ್ ಕಾಲೋನಿ ಬಳಿ ತೆರಳಿದ್ದ. ಬಳಿಕ ಕಟ್ಟಡವೊಂದರಿಂದ ಬಿದ್ದು ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಅಥವಾ ಈತನನ್ನು ಕೊಲೆ ಮಾಡಲಾಗಿದೆಯೋ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು CCTVಯನ್ನು ಪರಿಶೀಲನೆ ನಡೆಸಿದ್ದಾರೆ. ಸುಬ್ರಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನೀರಲ್ಲಿ ಮುಳುಗಿ ವಿದ್ಯಾರ್ಥಿಗಳು ಸಾವು