Webdunia - Bharat's app for daily news and videos

Install App

ಸಾವಿನಲ್ಲೂ ಸಾರ್ಥಕತೆ ಮೆರೆದ ಕೊಡಗಿನ ಯುವಕ: ರಾಜ್ಯದಲ್ಲಿ ಮೊದಲ ಬಾರಿಗೆ ಮೂಳೆ ದಾನ

Sampriya
ಮಂಗಳವಾರ, 24 ಡಿಸೆಂಬರ್ 2024 (16:59 IST)
Photo Courtesy X
ಮಡಿಕೇರಿ: ಬ್ರೈನ್ ಡೆಡ್ ಆದ ಯುವಕನೊಬ್ಬ ಸಾವಿನಲ್ಲೂ ಸಾರ್ಥಕತೆ ಮೆರೆದ ಘಟನೆ ಕೊಡಗಿನಲ್ಲಿ ನಡೆದಿದೆ. ಹೃದಯ, ಕಣ್ಣು, ಕಿಡ್ನಿ, ಚರ್ಮ, ಲಿವರ್‌ನಂತಹ ಮನುಷ್ಯನ ಅಂಗಾಂಗಳನ್ನು ದಾನ ಮಾಡುವುದನ್ನು ಕೇಳಿದ್ದೇವೆ. ಆದರೆ, ಕೊಡಗಿನ ಯುವಕನೋರ್ವ ತನ್ನ ಮೂಳೆಗಳನ್ನೇ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾನೆ. ಈ ಮೂಲಕ ಕ್ಯಾನ್ಸರ್‌ಪೀಡಿತ 6 ಮಕ್ಕಳ ಕಾಲುಗಳಿಗೆ ಬಲ ಬಂದಂತಾಗಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಂಬೂರು ಗ್ರಾಮದ 33 ವರ್ಷದ ಯುವಕ ಈಶ್ವರ್ ಅಪಘಾತದಲ್ಲಿ ಗಾಯಗೊಂಡಿದ್ದು, ಬ್ರೈನ್ ಡೆಡ್​ ಆಗಿದೆ.

ಹೀಗಾಗಿ ಕುಟುಂಬಸ್ಥರು​ ಸಾವಿನ ಸಂದರ್ಭದಲ್ಲಿ ಈಶ್ವರ್​ನ ಮೂಳೆಗಳನ್ನ ಆಸ್ಪತ್ರೆಗೆ ದಾನ ಮಾಡಿದ್ದಾರೆ. ಈ ರೀತಿ ಮೂಳೆ ದಾನ ಮಾಡಿರುವುದು ಕರ್ನಾಟಕ ರಾಜ್ಯದಲ್ಲೇ ಮೊದಲಾಗಿದೆ.

ಅಪಘಾತದಲ್ಲಿ ಡ್ರೈನ್​ ಡೆಡ್​ ಆಗಿದ್ದ ಯುವಕನ ಅಸ್ಥಿ (ಮೂಳೆ) ದಾನಕ್ಕೆ ಕುಟುಂಬಸ್ಥರು ಒಪ್ಪಿಗೆ ನೀಡಿದ್ದು, ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಎಲುಬು ಮತ್ತು ಕೀಲು ತಜ್ಞರ ವಿಭಾಗದ ಮುಖ್ಯಸ್ಥ ಡಾ.ವಿಕ್ರಮ್ ಶೆಟ್ಟಿ ನೇತೃತ್ವದಲ್ಲಿ ಅಪರೂಪದ ದಾನವನ್ನು ಯಶಸ್ವಿಯಾಗಿ ಸಂಗ್ರಹಿಸಲಾಗಿದೆ. ಇದರಿಂದ ಕ್ಯಾನ್ಸರ್‌ ಪೀಡಿತ 6 ಮಕ್ಕಳ ಕಾಲುಗಳನ್ನು ಉಳಿಸಬಹುದು ಎಂದು ಅಸ್ಥಿ ಸಂಗ್ರಹಿಸಿದ ಬಳಿಕ ಡಾ.ಶೆಟ್ಟಿ ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments