Publish Date: Tue, 06 Aug 2019 (14:27 IST)
Updated Date: Tue, 06 Aug 2019 (14:29 IST)
ಯುವಕನೊಬ್ಬ ಪೊಲೀಸ್ ಠಾಣೆಯ ಎದುರಲ್ಲೇ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಅಥಣಿ ಪೊಲೀಸ್ ಠಾಣೆ ಎದುರು ಚಾಕುವಿನಿಂದ ಕತ್ತು ಕೂಯ್ದುಕೊಂಡು ಆತ್ಮಹತ್ಯೆ ಯತ್ನವನ್ನ ಯುವಕನೊಬ್ಬ ನಡೆಸಿದ್ದಾನೆ.
ಶಂಕರ್ ಮಾರುತಿ ಕಾಂಬಳೆ (25) ಆತ್ಮಹತ್ಯೆ ಯತ್ನಿಸಿದ ಯುವಕನಾಗಿದ್ದಾನೆ.
ಯಾವ ಕಾರಣಕ್ಕೆ ಆತ್ಮಹತ್ಯೆ ಯತ್ನ ಮಾಡಿಕೊಂಡಿದ್ದಾನೆ ಎನ್ನೋ ಬಗ್ಗೆ ಸಧ್ಯಕ್ಕೆ ಮಾಹಿತಿ ಲಭ್ಯವಾಗಿಲ್ಲ. ಅಥಣಿ ಪೊಲೀಸ್ ರಿಂದ ಅಥಣಿ ಸರ್ಕಾರಿ ಆಸ್ಪತ್ರೆ ಗೆ ದಾಖಲು ಮಾಡಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಅಥಣಿ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆ ಇದಾಗಿದೆ.