ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಯುವಕನ ಹೊಟ್ಟೆಗೆ ಮೀನೊಂದು ಚುಚ್ಚಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಕಾರವಾರದಲ್ಲಿ ವರದಿಯಾಗಿದೆ.
ಮೃತ ಯುವಕನನ್ನು ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ದಾಂಡೇಭಾಗ ನಿವಾಸಿ ಅಕ್ಷಯ ಅನಿಲ ಮಾಜಾಳಿಕರ್ (24) ಎಂದು ಗುರುತಿಸಲಾಗಿದೆ.
ಅಕ್ಷಯ ಮಂಗಳವಾರ (ಅ.14) ಎಂದಿನಂತೆ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಈ ದುರಂತ ನಡೆದಿದೆ.
ಮೀನುಗಾರಿಕೆ ನಡೆಸುತ್ತಿದ್ದಾಗ ನೀರಿನಿಂದ ಸುಮಾರು 8 ರಿಂದ 10 ಇಂಚು ಉದ್ದದ ಮೀನೊಂದು ದೋಣಿಯೊಳಗೆ ಹಾರಿ ಬಂದಿದೆ. ಈ ಮೀನು ನೇರವಾಗಿ ಅಕ್ಷಯನ ಹೊಟ್ಟೆಗೆ ಚುಚ್ಚಿದ್ದು, ಆತನಿಗೆ ಗಂಭೀರ ಗಾಯವಾಗಿದೆ.
ಕೂಡಲೇ ಆತನನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೈದ್ಯರು ಗಾಯದ ಭಾಗಕ್ಕೆ ಹೊಲಿಗೆ ಹಾಕಿ, ಡಿಸ್ಚಾರ್ಜ್ ಮಾಡಿದ್ದರು.