Publish Date: Wed, 05 Feb 2020 (10:45 IST)
Updated Date: Wed, 05 Feb 2020 (10:47 IST)
ಹಾಸನ : ಪ್ರೀತಿ ನಿರಾಕರಿಸಿದ ಯುವತಿಯೊಬ್ಬಳನ್ನು ಯುವಕನೊಬ್ಬ ಕಿಡ್ನ್ಯಾಪ್ ಮಾಡಿ ಕಾರಿನಲ್ಲಿಯೇ ತಾಳಿ ಕಟ್ಟಿದ ಘಟನೆ ಹಾಸನದಲ್ಲಿ ನಡೆದಿದೆ.
ಮನು ಇಂತಹ ಕೃತ್ಯ ಎಸಗಿದ ಆರೋಪಿಯಾಗಿದ್ದು, ಈತ ಯುವತಿಯ ಅತ್ತೆಯ ಮಗ ಎಂಬುದಾಗಿ ತಿಳಿದುಬಂದಿದೆ. ಮನು ಯುವತಿಯನ್ನು ಪ್ರೀತಿಸುತ್ತಿದ್ದು, ಇದನ್ನು ಯುವತಿ ವಿರೋಧಿಸಿದ್ದಳು. ಆದಕಾರಣ ಯುವತಿ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಸ್ನೇಹಿತರ ಸಹಾಯದಿಂದ ಆಕೆಯನ್ನು ಅಪಹರಿಸಿ ಕಾರಿನಲ್ಲಿಯೇ ಬಲವಂತವಾಗಿ ತಾಳಿ ಕಟ್ಟಿದ್ದಾನೆ.
ಘಟನೆಯ ಬಳಿಕ ಆರೋಪಿ ಹಾಗೂ ಯುವತಿ ನಾಪತ್ತೆಯಾಗಿದ್ದು, ಈ ಬಗ್ಗೆ ಯುವತಿಯ ಪೋಷಕರು ದುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.