Publish Date: Mon, 05 Nov 2018 (09:58 IST)
Updated Date: Mon, 05 Nov 2018 (10:06 IST)
ಚಿಕ್ಕೋಡಿ : ಪ್ರೀತಿಸುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ.
ಮಂಜುನಾಥ ಕಾಗಲೆ (21) ಪ್ರೀತಿಸಿದವಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು, ಈತ ಹುಕ್ಕೇರಿ ಪಟ್ಟಣದ ಡಾಬಾದಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದ. ಆತ ಸ್ವಗ್ರಾಮದ ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಒಮ್ಮೆ ಆಕೆಯನ್ನು ಆತ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಮರ್ಯಾದೆಗೆ ಹೆದರಿದ ಬಾಲಕಿ ಈ ಕುರಿತು ಯಾರೊಬ್ಬರಿಗೂ ಹೇಳಿಕೊಂಡಿರಲಿಲ್ಲ. ಆದರೆ ಬಾಲಕಿಯ ಚಟುವಟಿಕೆಯಲ್ಲಿ ವ್ಯತ್ಯಾಸ ಕಂಡ ಪೋಷಕರು ಆಕೆಯನ್ನು ತೀವ್ರ ವಿಚಾರಣೆಗೆ ಮಾಡಿದಾಗ ಈ ವಿಚಾರವನ್ನು ಬಾಯ್ಬಿಟ್ಟಿದ್ದಾಳೆ. ಈ ಕುರಿತು ಪೋಷಕರು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಒಪ್ಪಿತ ಅಕ್ರಮ ಸಂಬಂಧ ಅಪರಾಧವಲ್ಲ. ಆದರೆ 18 ವರ್ಷದೊಳಗಿನ ಬಾಲಕಿಗೆ ಒಪ್ಪಿಗೆ ಇದ್ದರೂ ಲೈಂಗಿಕ ಕ್ರೀಯೆಗೆ ಒಳಪಡಿಸಿದರೆ ಅದು ಅಪರಾಧ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಹಿನ್ನಲೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.