ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಪ್ರವಾಸಿಗನೊಬ್ಬ ದುರಂತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಪ್ರವಾಸಿ ತಾಣ ಮುತ್ತತ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಹಾವೇರಿ ಮೂಲದ ಸಿದ್ದಲಿಂಗೇಶ್ (26) ಕಾವೇರಿ ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ ಯುವಕನಾಗಿದ್ದಾನೆ.
ಸಿದ್ದಲಿಂಗೇಶ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. 8 ಜನ ಸ್ನೇಹಿತರ ಜೊತೆ 4 ಬೈಕ್ ಗಳಲ್ಲಿ ಪ್ರವಾಸಕ್ಕೆ ಬಂದಿದ್ದರು. ಆ ತಂಡದಲ್ಲಿ ಸಿದ್ದಲಿಂಗೇಶ್ ಇದ್ದರು.
ಹಾವೇರಿ ಜಿಲ್ಲೆಯ ಹಾನಗಲ್ ನ ಬೆಳಗಲ್ ಪೇಟೆಯವನಾದ ಸಿದ್ದಲಿಂಗೇಶ್ ಕಾವೇರಿ ನದಿಯಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.