Webdunia - Bharat's app for daily news and videos

Install App

ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಯುವಕ; ಆ ಪತ್ರದಲ್ಲಿ ಅಂತದೇನಿದೆ…?

Webdunia
ಶುಕ್ರವಾರ, 6 ಏಪ್ರಿಲ್ 2018 (12:06 IST)
ವಿಜಯಪುರ : ತಮ್ಮ ಊರಿಗೆ ಪ್ರೌಢಶಾಲೆ- ಕಾಲೇಜುಗಳನ್ನು ನಿರ್ಮಿಸಬೇಕೆಂದು ಯುವಕನೊಬ್ಬ ತನ್ನ ರಕ್ತದಿಂದಲ್ಲೇ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾನೆ.


ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ನಿವಾಸಿಯಾದ ವಿಜಯರಂಜನ್ ಜೋಶಿ ಎಂಬಾತ ತನ್ನ ರಕ್ತದಲ್ಲಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಯುವಕನಾಗಿದ್ದು, ಆತ ಪತ್ರದಲ್ಲಿ,’10-15ಸಾವಿರ ಜನಸಂಖ್ಯೆ ಇರುವ ನಾಲತವಾಡ ಪಟ್ಟಣದಲ್ಲಿ ಸರ್ಕಾರಿ  ಪ್ರೌಢಶಾಲೆ- ಕಾಲೇಜುಗಳು ಯಾವುದೂ ಇಲ್ಲ. ಹತ್ತಾರು ಹಳ್ಳಿಗಳಿಂದ ದೂರ ಹೋಗಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗುತ್ತಿಲ್ಲ. ಉತ್ತರ ಕರ್ನಾಟಕದಲ್ಲಿ ಬರಗಾಲ , ಬಡತನ ಇರುವುದರಿಂದ ಖಾಸಗಿ ಶಾಲೆಯಲ್ಲಿ ಕಲಿಸುವಷ್ಟು ಶ್ರೀಮಂತರಲ್ಲ ಇಲ್ಲಿನ ಜನರು. ಸರ್ಕಾರಿ ಶಾಲೆ ಇಲ್ಲದೆ ಶಿಕ್ಷಣ ಸಿಗದ ಕಾರಣ ಬಾಲ್ಯವಿವಾಹಗಳು ಹೆಚ್ಚಾಗುತ್ತಿದೆ. ನೀವಾದರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತೀರಿ ಎಂಬ ನಂಬಿಕೆ ಮೇಲೆ ಈ ಪತ್ರ ಬರೆಯುತ್ತಿದ್ದೇನೆ’ ಎಂದು ತಿಳಿಸಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
i

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments