Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಸೇಕ್ರೆಡ್ ಹಾರ್ಟ್ ಕಾಲೇಜಿನ ಎರಡನೇ ಮಹಡಿಯಿಂದ ಆತ್ಮಹತ್ಮೆಗೆ ಯತ್ನಿಸಿದ ಯುವತಿ

webdunia
ಮಂಗಳವಾರ, 30 ನವೆಂಬರ್ 2021 (20:51 IST)
ಸೇಕ್ರೆಡ್ ಹಾರ್ಟ್ ಕಾಲೇಜಿನ ಎರಡನೇ ಮಹಡಿಯಿಂದ ವಿದ್ಯಾರ್ಥಿಯೊಬ್ಬಳು ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜೀವನ್‍ಭೀಮಾನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ  ಮಂಗಳವಾರ ನಡೆದಿದೆ. 
ಜೆಬಿನಗರದ ಮೀನಾ (19) ಆತ್ಮಹತ್ಯೆಗೆ ಯತ್ನಿಸಿದ ಬಿಸಿಎ ವಿದ್ಯಾರ್ಥಿನಿ. ತಾನು ವ್ಯಾಸಂಗ ಮಾಡುತ್ತಿದ್ದ ಜೀವನ್ ಭೀಮಾ ನಗರದ ಸೇಕ್ರೆಡ್ ಹಾರ್ಟ್ ಕಾಲೇಜು ಕಟ್ಟಡದ ಎರಡನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೆÇಲೀಸರು ತಿಳಿಸಿದರು. 
ಬಿಎ ವ್ಯಾಸಂಗ ಮಾಡುತ್ತಿದ್ದ ಮೀನಾ ಸಹೋದರಿ ಮನೆಯಲ್ಲಿ ವಾಸಿಸುತ್ತಿದ್ದಳು. ಸಹೋದರಿ ಹಾಗೂ ಬಾವನ ನಡುವೆ ನಡೆದ ಜಗಳದಿಂದ ಬೇಸೆತ್ತು ಕಾಲೇಜಿನ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನಲಾಗಿದೆ. ಕೆಳಗೆ ಬಿದ್ದು ಗಾಯಗೊಂಡ ಮೀನಾಳನ್ನು ಶಾಲೆಯ ಆಡಳಿತ ಮಂಡಳಿ ಸಿಬ್ಬಂದಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಜಿಗಿದ ರಭಸಕ್ಕೆ ವಿದ್ಯಾರ್ಥಿನಿಯ ಕಾಲು ಮುರಿದಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆ ಎಂದು ತಿಳಿದು ಬಂದಿದೆ. ಪೆÇಲೀಸರ ವಿಚಾರಣೆ ವೇಳೆ ಕಾಲು ಜಾರಿ 2ನೇ ಮಹಡಿಯಿಂದ ಬಿದ್ದಿರುವುದಾಗಿ ಮೀನಾ ಹೇಳಿಕೆ ನೀಡಿದ್ದಾಳೆ ಎಂದು ತಿಳಿದು ಬಂದಿದೆ. ಜೀವನ್ ಭೀಮಾನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ನಾಳೆಯಿಂದ ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಬಲು ದುಬಾರಿ