Select Your Language

Notifications

webdunia
webdunia
webdunia
webdunia

ಯುವತಿಯನ್ನು ಎಳೆದೊಯ್ದು ಗ್ಯಾಂಗ್​ರೇಪ್

ಯುವತಿಯನ್ನು ಎಳೆದೊಯ್ದು ಗ್ಯಾಂಗ್​ರೇಪ್
bangalore , ಶುಕ್ರವಾರ, 31 ಮಾರ್ಚ್ 2023 (19:19 IST)
ಸ್ನೇಹಿತನ ಜೊತೆ ಪಾರ್ಕ್​ನಲ್ಲಿ ಕುಳಿತಿದ್ದ ಯುವತಿಯನ್ನ ನಾಲ್ವರು ಸೇರಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಬೆಂಗಳೂರಿನ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾರ್ಚ್ 25ರ ರಾತ್ರಿ 10 ಗಂಟೆಗೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸರ್ಕಾರಿ ನೌಕರರು ಇರುವ ನ್ಯಾಷನಲ್ ಗೇಮ್ಸ್ ವಿಲೇಜ್​​​​ ಪಾರ್ಕ್​ನಲ್ಲಿ ಯುವತಿ ಹಾಗೂ ಆಕೆಯ ಸ್ನೇಹಿತ ಕುಳಿತುಕೊಂಡಿದ್ರು. ಈ ವೇಳೆ ಅಲ್ಲಿಗೆ ಬಂದ ನಾಲ್ವರು ಯುವಕರು ಆಕೆಯ ಸ್ನೇಹಿತನನ್ನ ಬೆದರಿಸಿ, ಆ ಯುವತಿಯನ್ನು ಎಳೆದೊಯ್ದು ಚಲಿಸುತ್ತಿದ್ದ ಕಾರಿನಲ್ಲಿ 4 ಜನರು ಅತ್ಯಾಚಾರ ಮಾಡಿದ್ದಾರೆ. ಈ ಕುರಿತು ಯುವತಿ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಗಳನ್ನ ಬಂಧಿಸಿದ್ದಾರೆ. ಇನ್ನು ಈ ಕಾಮುಕರು KA 01 MB 6169 ಸಂಖ್ಯೆಯ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ಮಹಾನಗರದ ಈ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಟ ನಡೆಸಿ ಕೃತ್ಯವೆಸಗಿದ್ದಾರೆ. ಬಳಿಕ ಮಾ.26ರ ಬೆಳಗ್ಗೆ 4 ಗಂಟೆಗೆ ಯುವತಿಯನ್ನ ಮನೆ ಬಳಿ ಬಿಟ್ಟು ಪರಾರಿಯಾಗಿದ್ದರು. ನಂತರ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಅದೇ ದಿನ ಪೊಲೀಸರು ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ನಾಲ್ವರು ಆರೋಪಿಗಳಾದ ಸತೀಶ್, ವಿಜಯ್, ಶ್ರೀಧರ್, ಕಿರಣ್ ಎಂಬುವವರನ್ನ ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

PSI ಹುದ್ದೆಗಾಗಿ ‘ಕೈ’ಮುಖಂಡನಿಂದ ದೋಖಾ