Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಕರ್ನಾಟಕಕ್ಕೆ ಆಮ್ ಆದ್ಮಿ ಪಾರ್ಟಿ ಅನಿವಾರ್ಯ- ಮುಖ್ಯಮಂತ್ರಿ ಚಂದ್ರು

webdunia
ಗುರುವಾರ, 23 ಜೂನ್ 2022 (20:36 IST)
ಖ್ಯಾತ ನಟ ರಾಜಕರಣಿ , ಮಾಜಿ ಶಾಸಕ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಮುಖ್ಯಮಂತ್ರಿ ಚಂದ್ರುರವರು ಆಮ್ ಆದ್ಮಿ ಪಾರ್ಟಿಗೆ ದಿನಾಂಕ 7/6/22,ಮಂಗಳವಾರ ದಂದು ಸೇರ್ಪಡೆಯಾಗಿದ್ದು ಈಗ ಎಎಪಿ ಯ ರಾಷ್ಟ್ರೀಯ ಸಂಚಾಲಕರು ಹಾಗೂ ದೆಹಲಿಯ ಮುಖ್ಯಮಂತ್ರಿ ಶ್ರೀ ಅರವಿಂದ್ ಕೇಜ್ರೀವಾಲ್ ಅವರನ್ನು ಭೇಟಿಯಾಗಲು ದೆಹಲಿಗೆ ಬಂದಿದ್ದರು.  ಇದೇ ವೇಳೆ ದೆಹಲಿಯ ಮೊಹಲ್ಲಾ ಕ್ಲಿನಿಕ್ ಹಾಗೂ ದೆಹಲಿ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ತಮ್ಮ ಅನುಭವವನ್ನು ಪತ್ರಕರ್ತರೊಂದಿಗೆ ಹಂಚಿಕೊಂಡರು. ತಾವು ಕೇಜ್ರಿವಾಲರ ಜನಸ್ನೇಹಿ ಕಾರ್ಯಕ್ರಮಗಳ ಬಗ್ಗೆ ಕೇಳಿದ್ದೆನು, ಈಗ ಕಣ್ಣಾರೆ ನೋಡಿ  ವಿಸ್ಮಿತನಾಗಿದ್ದೇನೆ ಎಂದರು. ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಸಂಚರಿಸಿ, ದೆಹಲಿಯ ಈ ಕಾರ್ಯಕ್ರಮಗಳ ಬಗ್ಗೆ ಕನ್ನಡಿಗರಿಗೆ ತಿಳಿಹೇಳುವುದಾಗಿ ಹೇಳಿ,  ಕರ್ನಾಟಕದ ಅಭಿವೃದ್ಧಿಗೆ ಆಮ್ ಆದ್ಮಿ ಪಾರ್ಟಿಯೇ ಅನಿವಾರ್ಯ ಎಂದು ಅಭಿಪ್ರಾಯ ಪಟ್ಟರು. 
 
 
ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿರವರು , “ಮುಖ್ಯಮಂತ್ರಿ ಚಂದ್ರುರವರು ನಾಡು, ನುಡಿ, ಜಲಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಇವುಗಳ ರಕ್ಷಣೆಯು ನಮ್ಮ ಪಕ್ಷದ ಮೂಲ ಸಿದ್ಧಾಂತ ಕೂಡ ಆಗಿದೆ.. ಭಾರತವು ರಾಜ್ಯಗಳ ಒಕ್ಕೂಟವಾಗಿದ್ದು, ಆಯಾ ರಾಜ್ಯಗಳಲ್ಲಿ ಆಯಾ ಭಾಷೆಗಳನ್ನು ಪ್ರೋತ್ಸಾಹಿಸುವ ಮೂಲಕ ಪ್ರಾದೇಶಿಕತೆಗೆ ಒತ್ತು ನೀಡಿ ರಾಷ್ಟ್ರದ ಸಮಗ್ರತೆ ಮತ್ತು ಐಕ್ಯತೆಯನ್ನು ಕಾಪಾಡುವುದೇ ಎಎಪಿಯ ಸ್ಪಷ್ಟ ನಿಲುವು. 
 
ಮೌಲ್ಯದರಿತ ರಾಜಕರಣಿ ರಾಮಕೃಷ್ಣ ಹೆಗಡೆ ಅವರ ಆಹ್ವಾನ ಮೇರೆಗೆ ಜನತಾ ಪಕ್ಷ ಸೇರಿ ಸಮಾಜಮುಖಿ ಕೆಲಸ ಮಾಡುತ್ತ ರಾಜ್ಯ ರಾಜಕರಣದಲ್ಲಿ ತಮ್ಮದೆ ಚಾಪು ಮೂಡಿಸಿದ ಚಂದ್ರು ಅವರು ಹೆಗಡೆ ಅವರ ನಂತರ  ಅಟಲ್ ಬಿಹಾರಿ ವಾಜಪೇಯಿ ಮತ್ತು ಲಾಲ್ ಕೃಷ್ಣ ಅಡ್ವಾಣಿ ಅವರ ಸಿದ್ಧಾಂತ ಮೆಚ್ಚಿ ಬಿಜೆಪಿ ಸೇರಿದರು, ಆದರೆ ಬಿಜೆಪಿ ಕುಲಶಿತವಾಗಿ ದ್ದನು ನೋಡಿ , ಕಾಂಗ್ರೆಸ್ ಸೇರಿದರು, ಇತ್ತಿಚಿನ ದಿನಗಳಲ್ಲಿ ಎಲ್ಲ ಪಕ್ಷಗಳಿಂದ ಬೇಸರಗೊಂಡು ರಾಜಕರಣದಿಂದ ದೂರ ಉಳಿಯವ ಯೋಜನೆಯಲ್ಲಿ ಇದ್ದಾಗ , ಅರವಿಂದ ಕೇಜ್ರಿವಾಲಾ ಅವರ ಆದ್ಮಿ ಪಕ್ಷದ ಸಿದ್ದಾಂತ ಮೆಚ್ಚಿ ಆಮ್ ಅದ್ಮಿ ಪಕ್ಷ ಸೇರಿದರು, ಗೌರಿಬಿದನೂರು ಕ್ಷೇತ್ರದ ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜನರ ಭಾವನೆಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ಸಿಕ್ಕಿರುವುದರಲ್ಲಿ ಇವರ ಪಾತ್ರ ಮಹತ್ವದ್ದಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣ ಸೇರಿದಂತೆ ಹಲವು ಸರ್ಕಾರಿ ತಾಣಗಳಲ್ಲಿ ಕನ್ನಡದಲ್ಲಿಯೂ ಸೂಚನಾ ಫಲಕಗಳು ಇರುವುದರ ಹಿಂದೆ ಚಂದ್ರುರವರ ಶ್ರಮವಿದೆ” ಎಂದು ಪೃಥ್ವಿ ರೆಡ್ಡಿ ಹೇಳಿದರು.
 
"ಮುಂಬರುವ ಎಲ್ಲ ಚುನಾವಣೆಗಳಲ್ಲಿ ಆಮ್ ಆದ್ಮಿ ಪಾರ್ಟಿ ಸ್ಪರ್ಧೆ ಮಾಡಲಿದೆ. ಎಲ್ಲ 224 ಸ್ಥಾನಗಳನ್ನು ಗೆಲ್ಲುವುದೆ ಆಮ್ ಆದ್ಮಿ ಪಾರ್ಟಿಯ ಗುರಿ. ಪ್ರಾಮಾಣಿಕ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಆಮ್ ಆದ್ಮಿ ಪಾರ್ಟಿ ಸೇರಬೇಕು” ಎಂದು ಚಂದ್ರುರವರು ಕರೆ ನೀಡಿದರು.
 
“ಆಮ್ ಆದ್ಮಿ ಪಾರ್ಟಿಯು ದೇಶದ ರಾಜಕೀಯವನ್ನು ಸರಿದಾರಿಗೆ ತರುತ್ತಿದೆ. ಬೇರೆಲ್ಲ ಪಕ್ಷಗಳು ಶಿಕ್ಷಣ - ಆರೋಗ್ಯ ಕ್ಷೇತ್ರಗಳನ್ನು ನಿರ್ಲಕ್ಷ್ಯಿಸಿದರೆ, ಆಮ್ ಆದ್ಮಿ ಪಾರ್ಟಿ ಸರ್ಕಾರವು ಇವುಗಳಿಗೆ ಹೆಚ್ಚಿನ ಆದ್ಯತೆ ನೀಡಿದೆ. ಈ ಮೂಲಕ ಸಮಾಜದ ಭವಿಷ್ಯವನ್ನು ಬಲಪಡಿಸುತ್ತಿದೆ. ಕರ್ನಾಟಕದಲ್ಲಿ ಎಎಪಿ ಅಧಿಕಾರಕ್ಕೇ ಬಂದು ಇಲ್ಲಿ ಕೂಡ ಪಾರದರ್ಶಕ ಹಾಗೂ ಜನಪರ ಆಡಳಿತ ನೀಡಿ ಜನ ನೆಮ್ಮದಿಯಿಂದ ಬದುಕುವಂತಹ ವಾತಾವರಣ ಮೂಡಬೇಕಿದೆ” ಎಂದು ಮುಖ್ಯಮಂತ್ರಿ ಚಂದ್ರು ಅಭಿಪ್ರಾಯ ಪಟ್ಟರು. 
 

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ