Select Your Language

Notifications

webdunia
webdunia
webdunia
webdunia

ಆಮ್ ಆದ್ಮಿ ಪಕ್ಷದಿಂದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ

ಆಮ್ ಆದ್ಮಿ ಪಕ್ಷದಿಂದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ
ಶಿವಾನಂದ ಮೇಲ್ಸೇತುವೆ ಬಳಿ  ಆಮ್ ಆದ್ಮಿ ಪಕ್ಷದ ನೂರಾರು ಕಾರ್ಯಕರ್ತರು ಆಗಮಿಸಿದ್ರು. ಬೆಂಗಳೂರಿಗರಿಗೆ 40 % ಕಮಿಷನ್ ಮೇಲ್ಸೇತುವೆ ಎಂಬ ನಾಮ ಫಲಕವನ್ನು  ಉದ್ಘಾಟಿಸಿದರು. ಈ  ಸಂದರ್ಭದಲ್ಲಿ  ಪಕ್ಷದ  ಕಾರ್ಯಕರ್ತರುಗಳನ್ನ ಪೊಲೀಸರು  ಬಂಧಿಸಿದ್ದಾರೆ.
 
ಪ್ರತಿಭಟನೆಯ ನೇತೃತ್ವವನ್ನು ವಹಿಸಿ ಮಾತನಾಡಿದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಈ ಸ್ಟೀಲ್ ಮೇಲ್ಸೇತುವೆಯು 19 ಕೋಟಿಗೆ ಆರಂಭಗೊಂಡು  7 ವರ್ಷಗಳ ನಂತರ 39ಕೋಟಿ ವೆಚ್ಚ ಮಾಡಿಯೂ  ಅತ್ಯಂತ ಕಳಪೆ ಕಾಮಗಾರಿ ಮಾಡಿದ್ದಾರೆ. ಈ  ಬಿಜೆಪಿ ಸರಕಾರ ಬೆಂಗಳೂರಿಗರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದವರು ಆಕ್ರೋಶ ವ್ಯಕ್ತಪಡಿಸಿದಾರೆ.
 
ಬೆಂಗಳೂರಿನಲ್ಲಿ ಇದೇ ರೀತಿಯ ಅನೇಕ  ಕಾಮಗಾರಿಗಳನ್ನು ಬಿಜೆಪಿ ಸರ್ಕಾರವು 3ಮತ್ತು 4ಪಟ್ಟು ಹೆಚ್ಚಿಸಿ  ಸಮಯ ವ್ಯರ್ಥ ಮಾಡುತ್ತಿದೆ . 40 %ಕಮಿಷನ್ ದಂಧೆಯಲ್ಲಿ ಮುಳುಗಿರುವ ಬಿಜೆಪಿಗೆ ಜನರು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮೋಹನ್ ದಾಸ್  ಎಚ್ಚರಿಸಿದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಮತದಾರರ ಪಟ್ಟಿ ಕುರಿತಂತೆ ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ಬಿಬಿಎಂಪಿ ಸಹಾಯವಾಣಿ