ನಿನ್ನೆ ರಾಜಾಜಿನಗರದಂತೆ ರಸ್ತೆ ಗುಂಡಿ ಅಪಘಾತದಲ್ಲಿ ಸಾವಿಗೀಡಾದ ಮಾರಪ್ಪ ಗಾರ್ಡನ್ ನಿವಾಸಿ ಕುಮಾರ್ ರವರ ಮನೆ ಎದುರು ಆಮ್ ಆದ್ಮಿ ಪಾರ್ಟಿಯಿಂದ ಪ್ರತಿಭಟನೆ ಮಾಡಲಾಗಿದೆ.ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.ಮುಖ್ಯಮಂತ್ರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಬೇಕು,ತಕ್ಷಣಕ್ಕೆ ಪರಿಹಾರ ವಿತರಿಸಬೇಕು ಹಾಗೂ ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಬಂಧಿಸಿ ಜೈಲಿಗಟ್ಟಬೇಕು.ಬಿಬಿಎಂಪಿ ಅಧಿಕಾರಿಗಳಿಗೆ ಮಾನ ಮರ್ಯಾದೆ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ರಸ್ತೆ ಗುಂಡಿಗಳಿಗೆ ನಿಮಗೆಷ್ಟು ಬಲಿ ಬೇಕು ?೪೦% ಸರ್ಕಾರ ಇದು ಸರ್ಕಾರಕ್ಕೆ ನಾಚಿಕೆ ಆಗಬೇಕು.ಜೆಸಿಬಿ ಎದುರು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರತಿಭಟಿಸಿ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ಹೊರಹಾಕಿದ್ದಾರೆ.