Daily Horoscope
✕

ಜಿಲ್ಲಾಧಿಕಾರಿ ಮಂಜುನಾಥ್‌ ಬಂಧನಕ್ಕೆ ಎಎಪಿ ಒತ್ತಾಯ

Webdunia
ಶನಿವಾರ, 25 ಜೂನ್ 2022 (16:23 IST)
ಲಂಚ ಪಡೆದ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಂಗಳೂರು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ರವರನ್ನು ಅಮಾನತು ಮಾಡಿ,  ಶೀಘ್ರವೇ ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಮ್‌ ಆದ್ಮಿ ಪಾರ್ಟಿ ಆಗ್ರಹಿಸಿದೆ.
 
ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ರಾಜ್ಯ ವಕ್ತಾರ ಹಾಗೂ ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿ, “ಆನೇಕಲ್‌ ತಾಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿ ಅರ್ಜಿದಾರರ ಪರ ತೀರ್ಪು ನೀಡಲು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟು, ಮುಂಗಡವಾಗಿ 5 ಲಕ್ಷ ಪಡೆದಿರುವುದು ಎಸಿಬಿ ದಾಳಿಯಿಂದ ಸಾಬೀತಾಗಿದೆ. ಈ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮೂರನೇ ಆರೋಪಿಯೆಂದು ಎಸಿಬಿಯು ವರದಿಯಲ್ಲಿ ಸ್ಪಷ್ಟವಾಗಿ ಹೇಳಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಶೀಘ್ರವೇ ಹುದ್ದೆಯಿಂದ ಅಮಾನತು ಮಾಡಿ, ಬಂಧಿಸಿ ವಿಚಾರಣೆ ನಡೆಸಬೇಕು” ಎಂದು ಆಗ್ರಹಿಸಿದರು.
 
“ಜಿಲ್ಲಾಧಿಕಾರಿ ಮಂಜುನಾಥ್‌ರವರು ಈ ಪ್ರಕರಣ ಮಾತ್ರವಲ್ಲದೇ, ಈ ಹಿಂದಿನ ಅನೇಕ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ. ಕಂದಾಯ ಸಚಿವ ಆರ್‌.ಅಶೋಕ್‌ರವರು ಅವ್ಯವಹಾರ ಮಾಡಲೆಂದೇ ಭ್ರಷ್ಟ ಅಧಿಕಾರಿಯನ್ನು ಜಿಲ್ಲಾಧಿಕಾರಿಯಾಗಿ ನೇಮಿಸಿಕೊಂಡಿದ್ದಾರೆ. ಭ್ರಷ್ಟಾಚಾರ ಸಂಬಂಧ ಎಸಿಬಿ ನೀಡಿರುವ ವರದಿ ಕುರಿತು ಆರ್.ಅಶೋಕ್‌ ಪ್ರತಿಕ್ರಿಯಿಸಬೇಕು. ಮಂಜುನಾಥ್‌ ವಿರುದ್ಧದ ಎಲ್ಲ ಆರೋಪಗಳ ಕುರಿತು ಸಮಗ್ರ ತನಿಖೆಯಾಗಬೇಕು” ಎಂದು ಆಗ್ರಹಿಸಿದರು.
 
ಗಾಂಧಿನಗರ ವಿಧಾನಸಭಾ ಕ್ಷೇತ್ರದ ಎಎಪಿ ಉಪಾಧ್ಯಕ್ಷರಾದ ಗೋಪಿನಾಥ್‌ ಮಾತನಾಡಿ, “ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರವು ಮಿತಿಮೀರಿದೆ. ಸಚಿವರು ಹಾಗೂ ಶಾಸಕರುಗಳು ಕೂಡ ಭ್ರಷ್ಟರಾಗಿರುವುದರಿಂದ ಅಧಿಕಾರಿಗಳನ್ನು ಪ್ರಶ್ನೆ ಮಾಡುವ ನೈತಿಕತೆಯನ್ನು ಅವರು ಕಳೆದುಕೊಂಡಿದ್ದಾರೆ. ಇದರಿಂದಾಗಿ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದ್ದು, ಸಣ್ಣ ಕೆಲಸಕ್ಕೂ ಲಕ್ಷಗಟ್ಟಲೆ ಲಂಚ ನೀಡಬೇಕಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿಯಲ್ಲಿನ ಭ್ರಷ್ಟಾಚಾರವನ್ನು ಸಹಿಸಿಕೊಳ್ಳುವ ಬದಲು ಎಸಿಬಿಗೆ ದೂರು ನೀಡಿದ ಅಜಂ ಪಾಷಾರವರ ನಡೆ ಶ್ಲಾಘನೀಯ” ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ತಿ ಖರೀದಿ ಮಾಡುವಾಗ ವಂಚನೆಗೊಳಗಾಗದಂತೆ ಈ ದಾಖಲೆಗಳ ಬಗ್ಗೆ ಎಚ್ಚರಿಕೆ ಇರಬೇಕು

ಅತ್ತೆ, ಮಾವನ ಮೇಲೆ ಇಂಥ ಸಂದರ್ಭಗಳಲ್ಲಿ ಮಾತ್ರ ಕೇಸ್ ಹಾಕಬಹುದು: ಇಲ್ಲಿದೆ ಕಾನೂನು ಪೂರ್ಣ ವಿವರ

ಹೆಂಡತಿ ಕಾಲಿಗೆ ಬಿದ್ದು ಗೋಳಾಡಿದರೂ ಕರಗದ ಪತಿ: ಮಗುವಾಗಲಿಲ್ಲ ಎಂಬ ಕಾರಣಕ್ಕೆ ಡಿವೋರ್ಸ್ Video

Karnataka Weather: ವಿವಿಧ ಜಿಲ್ಲೆಗಳಲ್ಲಿ ಇಂದು ಮಳೆಯ ಮುನ್ಸೂಚನೆ

ನಿಮಗಾಗಿ ನಾವೆಷ್ಟು ಹೊತ್ತು ಕಾಯಬೇಕು…ಡಿ ಕೆ ಶಿವಕುಮಾರ್ ಲೈವ್ ದೃಶ್ಯಕ್ಕೆ ಚಪ್ಪಲಿ ಎಸೆದು ಪ್ರತಿಭಟನೆ, ವಿಡಿಯೋ ವೈರಲ್

ಮುಂದಿನ ಸುದ್ದಿ
Show comments