Select Your Language

Notifications

webdunia
webdunia
webdunia
webdunia

ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಅಬ್ದುಲ್ ಬಶೀರ್ ನಿಧನ

ಅಬ್ದುಲ್ ಬಷೀರ್
ಮಂಗಳೂರು: ಕೊಟ್ಟಾರ ಚೌಕಿಯ ಬಳಿ ದುಷ್ಕರ್ಮಿಗಳ ದಾಳಿಗೆ ಒಳಗಾಗಿ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಬ್ದುಲ್ ಬಶೀರ್ (47) ಕೊನೆಯುಸಿರೆಳೆದಿದ್ದಾರೆ. ಕಾಟಿಪಳ್ಳಿಯಲ್ಲಿ ದೀಪಕ್ ರಾವ್ ಕೊಲೆ ನಡೆದ ಡಿಸೆಂಬರ್ 3ರ ರಾತ್ರಿಯಂದೇ ಬಶೀರ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು.


ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಸತತ 17 ಬಾರಿ ಬಶೀರ್ ಅವರ ಮೇಲೆ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡು ರಸ್ತೆಬದಿಯಲ್ಲಿ ಬಿದ್ದಿದ್ದ ಬಶೀರ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಇಂದು ಬೆಳಿಗ್ಗೆ 8.05ಕ್ಕೆ ಬಶೀರ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರಿನಲ್ಲಿ ಬಷೀರ್ ಸಾವಿನ ಕುರಿತು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದು ಯಾರ ವಿರುದ್ಧ ಗೊತ್ತಾ...?