Webdunia - Bharat's app for daily news and videos

Install App

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

Sampriya
ಬುಧವಾರ, 28 ಮೇ 2025 (16:47 IST)
Photo Credit X
ಮಂಗಳೂರು: ಬಂಟ್ವಾಳದ ಕುರಿಯಾಳದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮಂಗಳವಾರ ನಡೆದ ಅಬ್ದುಲ್ ರಹೀಂ ಹತ್ಯೆ ಪ್ರಕರಣ ಸಂಬಂದ 15 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಎಫ್‌ಐಆರ್‌ನಲ್ಲಿ ದೀಪಕ್, ಸುಮಿತ್ ಮತ್ತು ಇತರ 13 ಜನರ ಹೆಸರುಗಳನ್ನು ದಾಖಲಿಸಲಾಗಿದ್ದು, ಇವರ ವಿರುದ್ಧ ಸೆಕ್ಷನ್ 103, 109, 118(1), 118(2), 190, 191(1), 191(2) ಮತ್ತು 191(3) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ಮೊಹಮ್ಮದ್ ನಿಸಾರ್ ಎಂಬುವವರು ದೂರು ನೀಡಿದ್ದು, ದೂರಿನ ಪ್ರಕಾರ ಮಧ್ಯಾಹ್ನ 3 ಗಂಟೆಗೆ ಮುಸ್ತಫಾ ಎಂಬವರಿಂದ ದೂರವಾಣಿ ಕರೆ ಬಂದಿತ್ತು. ಇರ ಕೋಡಿಯಲ್ಲಿ ಅಬ್ದುಲ್ ರಹೀಮ್ ಮತ್ತು ಕಲಂದರ್ ಶಫಿ (ಗಾಯಗೊಂಡ) ಮೇಲೆ 'ತಲ್ವಾರ್' ನಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿಸಿದ್ದರು.

ಮಧ್ಯಾಹ್ನ 3.45 ಕ್ಕೆ ಸ್ಥಳಕ್ಕೆ ತಲುಪಿದಾಗ ರಹೀಮ್ ತಲೆ, ಕುತ್ತಿಗೆ ಮತ್ತು ದೇಹದ ಇತರ ಭಾಗಗಳಲ್ಲಿ ಗಂಭೀರ ಗಾಯಗೊಂಡು ಕುಸಿದು ನೆಲಕ್ಕೆ ಬಿದ್ದಿದ್ದರು.  

ರಹೀಮ್ ಪಕ್ಕದಲ್ಲಿ ಕುಳಿತಿದ್ದ ಕಲಂದರ್ ಶಫಿ ಅವರ ಎದೆ, ಬೆನ್ನು ಮತ್ತು ಕೈಗಳಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಂಬ್ಯುಲೆನ್ಸ್‌ನಲ್ಲಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

Viral Video, ಪಾಟ್ನಾ: ಹಾಡಹಗಲೇ ಆಸ್ಪತ್ರೆಯೊಳಗೆ ನುಗ್ಗಿ ಕೊಲೆ ಆರೋಪಿಯನ್ನು ಗುಂಡಿಕ್ಕಿ ಕೊಂದ ಐವರ ಗುಂಪು

ಬಿಜೆಪಿ ಶಾಸಕರನ್ನು ಕಾಂಗ್ರೆಸ್ ಟಾರ್ಗೆಟ್ ಮಾಡ್ತಿದೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments