Webdunia - Bharat's app for daily news and videos

Install App

ಕಾಂಗ್ರೆಸ್- ಜೆಡಿಎಸ್ ಮೈತ್ರಿಯ ವಿಚಾರದ ಮಾಹಿತಿ ಇಲ್ಲ: ಜಾರ್ಜ್

Webdunia
ಶುಕ್ರವಾರ, 28 ಆಗಸ್ಟ್ 2015 (19:30 IST)
ಬಿಬಿಎಂಪಿಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಪರೋಕ್ಷವಾಗಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿವೆ ಎನ್ನುವ ವರದಿಗಳ ಬಗ್ಗೆ  ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್​ ಹೇಳಿದ್ದಾರೆ.
 
ಮತ್ತೊಂದೆಡೆ ಬಿಜೆಪಿ ನಾಯಕರು ಮೈತ್ರಿ ವಿರುದ್ಧ ಗುಡುಗುತ್ತಿದ್ದಾರೆ. 'ಜನರು ಕೊಟ್ಟ ತೀರ್ಪಿಗೆ ಕಾಂಗ್ರೆಸ್​ ವಿರುದ್ಧವಾಗಿ ನಡೆಯುತ್ತಿದೆ' ಎಂದಿರುವ ಬಿಬಿಎಂಪಿ ಚುನಾವಣಾ ಉಸ್ತುವಾರಿ ಹೊಣೆ ಹೊತ್ತ ಆರ್. ಅಶೋಕ್, ಈ ನಡೆ 'ಇದು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಕಂಟಕವಾಗಲಿದೆ' ಎಂದು ಎಚ್ಚರಿಸಿದ್ದಾರೆ.
 
ಕಾಂಗ್ರೆಸ್ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ ದುರುದ್ದೇಶ ಹೊಂದಿದೆ ಹಾಗಾಗಿ ಸರ್ಕಾರ ಮೇಯರ್​ ಆಯ್ಕೆಗೆ ಅಧಿಸೂಚನೆ ಹೊರಡಿಸಲು ವಿಳಂಬ ಮಾಡುತ್ತಿದೆ ಎಂದಿದ್ದಾರೆ. ಅಲ್ಲದೇ ಪಕ್ಷದ ಹಿರಿಯ ನಾಯಕರ ಜತೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
 
ಈ ಕುರಿತು ಪ್ರತಿಕ್ರಿಯೇ ನೀಡಿರುವ ಶಾಸಕ ವೈಎಸ್’ವಿ ದತ್ತ, ನಾನು ಈಗ ತಾನೇ ಸಿದ್ದರಾಮಯ್ಯ ಅವನ್ನು ಭೇಟಿ ಮಾಡಿ ಬಂದಿದ್ದೇನೆ, ನನ್ನ ಕ್ಷೇತ್ರ ಸಮಸ್ಯೆ ಕುರಿತು ಚರ್ಚೆ ನಡೆಸಿದ್ದೇನೆ ಹೊರತು 'ಕಾಂಗ್ರೆಸ್- ಜೆಡಿಎಸ್ ಮೈತ್ರಿಯ ವಿಚಾರವಾಗಿ ಯಾವುದೇ ಮಾತುಕತೆ ನಡೆದಿಲ್ಲ' ಎಂದಿದ್ದಾರೆ.
 
ಆದರೆ ನಾನು ವೈಯಕ್ತಿಕವಾಗಿ ಇಂತಹ 'ಬೆಳವಣಿಗೆಯನ್ನು ಬೆಂಬಲಿಸುತ್ತೇನೆ' ಎಂದಿರುವ ದತ್ತಾ, ಕಾಂಗ್ರೆಸ್ ನಿಂದ ಇಂತಹ ಬೇಡಿಕೆ ಬಂದಲ್ಲಿ ಖಂಡಿತ ಮುಂದುವರೆಯುವುದಾಗಿ ಹೇಳಿದ್ದಾರೆ. ವರಿಷ್ಠರು ಒಪ್ಪಿದರೆ ನಮ್ಮದೇನು ಅಡ್ಡಿ ಇಲ್ಲ ಎಂದಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments