Select Your Language

Notifications

webdunia
webdunia
webdunia
webdunia

ಎಲ್ಲಕ್ಕಿಂತ ಸೋನಿಯಾ, ರಾಹುಲ್ ಗಾಂಧಿ ನಿರ್ಣಯವೇ ಅಂತಿಮ: ಎಂಬಿ ಪಾಟೀಲ

Karnataka Cabinet Rejig Buzz, CM Siddaramaiah, Minister MB Patil

Sampriya

ಬೆಂಗಳೂರು , ಸೋಮವಾರ, 17 ನವೆಂಬರ್ 2025 (16:03 IST)
ಬೆಂಗಳೂರು: ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಯೇ ಇಲ್ಲದಿರುವುದರಿಂದ ನಾಯಕತ್ವ ಬದಲಾವಣೆಯ ವಿಷಯವೇ ಅಪ್ರಸ್ತುತ. ಎಲ್ಲವೂ ಹೈಕಮಾಂಡ್ ನಿರ್ಧಾರ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಒಂದು ವೇಳೆ ಸಂಪುಟ ಪುನರ್‌ರಚನೆ ಅಥವಾ ಯಾವುದೇ ಪ್ರಮುಖ ರಾಜಕೀಯ ನಿರ್ಧಾರ ಕೈಗೊಳ್ಳುವುದಿದ್ದರೂ, ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ಸೇರಿ ತೀರ್ಮಾನಿಸುತ್ತದೆ ಎಂದರು. 

ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಟ್ಟಾಗಿ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರುತ್ತಾರೆ. ಎಲ್ಲಕ್ಕಿಂತ ಹೆಚ್ಚಾಗಿ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ನಿರ್ಣಯವೇ ಅಂತಿಮ ಎಂದು ಹೇಳಿದರು. 




Share this Story:

Follow Webdunia kannada

ಮುಂದಿನ ಸುದ್ದಿ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ: ದಾಖಲೆಯ 10ನೇ ಬಾರಿ ಗದ್ದುಗೇರಲು ಮುಹೂರ್ತ ಫಿಕ್ಸ್‌