Webdunia - Bharat's app for daily news and videos

Install App

ಗುತ್ತಿಗೆದಾರನಿಗೆ ನಿಂದನೆ, ಕೊಲೆ ಬೆದರಿಕೆ: ಪೊಲೀಸ್‌ ಕಸ್ಟಡಿಗೆ ಶಾಸಕ ಮುನಿರತ್ನ

Sampriya
ಭಾನುವಾರ, 15 ಸೆಪ್ಟಂಬರ್ 2024 (10:03 IST)
ಬೆಂಗಳೂರು: ಶನಿವಾರ ಬಂಧನಕ್ಕೆ ಒಳಗಾಗ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.

ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಜಾತಿ ನಿಂದನೆ, ಕಿರುಕುಳ, ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿರುವ ಆರೋಪದಲ್ಲಿ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿ ಕರೆತಂದರು. ರಾತ್ರಿ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

ಈ ವೇಳೆ ಪೊಲೀಸರು ಒಂದು ವಾರ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿಗೆ ಮನವಿ ಮಾಡಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.

ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಚಲುವರಾಜು ಎಂಬವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದಲ್ಲದೆ, ರಕ್ಷಣೆ ನೀಡುವಂತೆ ಮನವಿ ಮಾಡಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments