ಕೋಟ್ಯಂತರ ರೂಪಾಯಿ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಅವರನ್ನು ಭ್ರಷ್ಟಾಚಾರ ನಿಗ್ರಹ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಗ್ರಾಮದ ನಿವಾಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯವಸ್ಥಾಪಕ ನಾಗರಾಜಪ್ಪ ವಿರುದ್ಧ ಎಸಿಬಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಅಧಿಕಾರಿಗಳು ಆರೋಪ ಮೇಲ್ನೋಟಕ್ಕೆ ದೃಢಪಟ್ಟ ಹಿನ್ನೆಲೆಯಲ್ಲಿ ಲೀಲಾವತಿ ಅವರನ್ನು ಬಂಧಸಿಇ ಅವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಕಡತಗಳನ್ನು ತನಿಖೆಗೆ ಒದಗಿಸುವಂತೆ ಲೀಲಾವತಿ ಅವರಿಗೆ ಸೂಚಿಸಲಾಗಿತ್ತು ಆದರೆ ಕಡತಗಳನ್ನು ಒದಗಿಸದೆ ಅಸಹಕಾರ ತೋರಿದ ಹಿನ್ನೆಲೆ ಅವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸಿಬಿ ಮಾಹಿತಿ ನೀಡಿದೆ.
ನಕಲಿ ಫಲಾನುಭವಿಗಳ ಪಟ್ಟಿಯನ್ನು ಸೃಷ್ಟಿಮಾಡಿ 150 ಕೋಟಿ ಅವ್ಯವಹಾರ ನಡೆಸಿರುವ ಆರೋಪದ ಸಂಬಂಧ ಮತ್ತು 2018 ರಿಂದ 2000 21ನೇ ಸಾಲಿನವರೆಗೆ ಉದ್ಯಮಶೀಲತಾ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಮಂಜೂರಾದ ಮೊತ್ತಕ್ಕಿಂತಲೂ ಹೆಚ್ಚು ಜನ ಮಾಡಿರುವುದರ ಕುರಿತು ಎಸಿಬಿ ತನಿಖೆ ಮುಂದುವರಿಸಿದೆ.