Select Your Language

Notifications

webdunia
webdunia
webdunia
webdunia

ಎಬಿವಿಪಿ ಕಾರ್ಯಕರ್ತ ಅಭಿಷೇಕ್ ಕುಟುಂಬಕ್ಕೆ ಸಾಂತ್ವನ ಹೇಳಿದ ಈಶ್ವರಪ್ಪ

ಎಬಿವಿಪಿ ಕಾರ್ಯಕರ್ತ ಅಭಿಷೇಕ್ ಕುಟುಂಬಕ್ಕೆ ಸಾಂತ್ವನ ಹೇಳಿದ ಈಶ್ವರಪ್ಪ
ಚಿಕ್ಕಮಗಳೂರು , ಗುರುವಾರ, 12 ಜನವರಿ 2017 (18:17 IST)
ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದ ಎಬಿವಿಪಿ ಕಾರ್ಯಕರ್ತ ಅಭೀಷೆಕ್ ನಿವಾಸಕ್ಕೆ ಭೇಟಿ ನೀಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸಿ.ಈಶ್ವರಪ್ಪ, ಅಭಿಷೇಕ್ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
 
ಈ ವೇಳೆ ಶೃಂಗೇರಿಯ ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಅಭಿಷೇಕ್ ಸಾವಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು. 
 
ಜನವರಿ 7 ರಂದು ಶೃಂಗೇರಿಯಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಚಕ್ರವರ್ತಿ ಸೂಲಿಬೆಲೆ ಅವರು ಬರಬೇಕಿತ್ತು. ಆದರೆ, ಅವರು ಬರದಂತೆ ಎನ್‌ಎಸ್‌ಯುಐ ಸುದ್ದಿಗೋಷ್ಠಿ ನಡೆಸಿತ್ತು. ಹೀಗಾಗಿ ಎಬಿವಿಪಿ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿತ್ತು ಎಂದು ಹೇಳಾಗುತ್ತಿತ್ತು. 
 
ಗಲಾಟೆಗೆ ಸಂಬಂಧಿಸಿದಂತೆ ಎಬಿವಿಪಿ ನಾಲ್ವರ ಕಾರ್ಯಕರ್ತರ ವಿರುದ್ಧ ದೂರು ದಾಖಲಾಗಿತ್ತು. ಈ ನಾಲ್ವರಲ್ಲಿ ಅಭಿಷೇಕ್ ಕೂಡಾ ಒಬ್ಬನಾಗಿದ್ದ. ಹೀಗಾಗಿ 'ನನ್ನ ಜೀವನ ಹಾಳಾಯ್ತು' ಎಂದು ಎಬಿವಿಪಿ ಕಾರ್ಯಕರ್ತ ಅಭಿಷೇಕ್ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅಭಿಷೇಕ್ ಆತ್ಮಹತ್ಯೆ ಪ್ರಕರಣ: ಎಸ್‌ಪಿ, ಐಜಿ ನೇತೃತ್ವದಲ್ಲಿ ತನಿಖೆ ಎಂದ ಪರಮೇಶ್ವರ್