Select Your Language

Notifications

webdunia
webdunia
webdunia
webdunia

ಎಬಿವಿಪಿ, ಬಿಜೆಪಿ ಪೊಳ್ಳು ದೇಶಭಕ್ತರು: ವಿ.ಎಸ್.ಉಗ್ರಪ್ಪ

ಎಬಿವಿಪಿ, ಬಿಜೆಪಿ ಪೊಳ್ಳು ದೇಶಭಕ್ತರು: ವಿ.ಎಸ್.ಉಗ್ರಪ್ಪ
ಬೆಂಗಳೂರು , ಶುಕ್ರವಾರ, 26 ಆಗಸ್ಟ್ 2016 (15:39 IST)
ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಪಾಕಿಸ್ತಾನ ಪರವಾಗಿ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ, ಎಬಿವಿಪಿ ಹಾಗೂ ಬಿಜೆಪಿ ಕಾರ್ಯಕರ್ತರು ಡೋಂಗಿ ದೇಶಭಕ್ತರು ಎಂದು ಕಿಡಿಕಾರಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಭಾವ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ನಟಿ ರಮ್ಯಾ ಹೇಳಿಕೆಯನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
 
ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಪಾಕಿಸ್ತಾನ ಪರವಾಗಿ ನೀಡಿರುವ ಹೇಳಿಕೆಯಲ್ಲಿ ತಪ್ಪಿಲ್ಲ. ಎಬಿವಿಪಿ ಹಾಗೂ ಬಿಜೆಪಿ ಕಾರ್ಯಕರ್ತರು ಡೋಂಗಿ ದೇಶಭಕ್ತರು ಎಂದು ಆಕ್ರೋಶ ವ್ಯಕ್ತಪಡಿಸಿದರು. 
 
ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ಅವರು ಪಾಕಿಸ್ತಾನ ನರಕವಿದ್ದಂತೆ ಅಂತಾ ಹೇಳಿಕೆಯೊಂದನ್ನು ನೀಡಿದ್ದರು. ಈ ಹೇಳಿಕೆಗೆ ತಿರುಗೇಟು ನೀಡುವ ಭರದಲ್ಲಿ ನಟಿ ರಮ್ಯಾ ಅವರು ಪಾಕಿಸ್ತಾನದಲ್ಲಿ ಹಾಗೇನಿಲ್ಲ. ಅಲ್ಲಿನ ಜನರು ನಮ್ಮಂತೆ ಒಳ್ಳೆಯವರು ಅಂತಾ ಹೇಳುವ ಮೂಲಕ ಪಾಕಿಸ್ತಾನವನ್ನು ಹಾಡಿ ಹೊಗಳಿದ್ದು ಇತ್ತೀಚೆಗಷ್ಟೇ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಹಿಂದುಳಿದ ವರ್ಗದವರ ಹೀನಸ್ಥಿತಿಗೆ ಕಾಂಗ್ರೆಸ್ ನೇರ ಕಾರಣ: ಈಶ್ವರಪ್ಪ