ಬೆಂಗಳೂರಿನಲ್ಲಿ ಭಾರತೀಯ ಸೇನೆ ವಿರುದ್ಧ ಆಕ್ಷೇಪಾರ್ಹ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ಮುಖಂಡರು ರಾಜ್ಯಪಾಲರನ್ನು ಭೇಟಿ ಮಾಡಿ ದೂರು ಸಲ್ಲಿಸಿದರು.
ಎಬಿವಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನಯ್ ಬಿದರೆ ಸೇರಿದಂತೆ ಪ್ರಮುಖ ನಾಯಕರು ರಾಜಭವನಕ್ಕೆ ತೆರಳಿ ರಾಜ್ಯಪಾಲರಾದ ವಜೂಬಾಯಿ ವಾಲಾ ಅವರಿಗೆ ದೂರು ಸಲ್ಲಿಸಿದ್ದಾರೆ.
ಬೆಂಗಳೂರು ನಗರದ ಮಿಲ್ಲರರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಅಮ್ನೆಸ್ಟಿ ಇಂಡಿಯಾ ಸಂಸ್ಥೆ ಕಾಶ್ಮೀರಿಗಳ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಕಾರ್ಯಾಗಾರವನ್ನು ಹಮ್ಮಿಕೊಂಡಿತ್ತು. ಈ ವೇಳೆ ಕಾಶ್ಮೀರಿಗಳಿಗೆ ಭಾರತೀಯ ಸೇನೆಯಿಂದ ಮುಕ್ತಿ ನೀಡಿ ಎಂದು ಆಗ್ರಹಿಸಿ ಕೆಲವರು ಸೇನೆಯ ವಿರುದ್ಧ ಆಕ್ಷೇಪಾರ್ಹ ಘೋಷಣೆ ಕೂಗಿದ್ದರು.
ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿರುವುದನ್ನು ಖಂಡಿಸಿ ಒಂದು ವಾರದಿಂದ ಎಬಿವಿಪಿ ಕಾರ್ಯಕರ್ತರು ಅಸಹಕಾರ ಪ್ರತಿಭಟನೆ ಕೈಗೊಂಡಿದ್ದರು.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ