Publish Date: Wed, 30 Mar 2022 (19:13 IST)
Updated Date: Wed, 30 Mar 2022 (19:16 IST)
ಬೆಂಗಳೂರು ಉತ್ತರ ವಲಯ ಬೆಸ್ಕಾಂ ಇಇ ಲಕ್ಷ್ಮೀಶ್ ಮೇಲೆ ಇಂದು ಎಸಿಬಿ ದಾಳಿ ನಡೆಸಿದ್ದಾರೆ. ಆದಾಯಕ್ಕೂ ಅಧಿಕ ಆಸ್ತಿ ಸಂಪಾದನೆ ಹಿನ್ನೆಲೆ ದಾಳಿ ನಡೆಸಲಾಗಿದ್ದು, ಬಿನ್ನಿ ಮಿಲ್ ಬಳಿಯ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆದಿದೆ. ಎರಡು ದಿನಗಳ ಹಿಂದೆ 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದಿದ್ದ ಲಕ್ಷ್ಮೀಶ್ರನ್ನ ACB ಬಂಧಿಸಿದೆ. ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿರುವ ಎಸಿಬಿ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿನ ಮನೆ ಹಾಗೂ ಅರಸಿಕೆರೆಯ ಮನೆಯಲ್ಲಿ ಪರಿಶೀಲನೆ ನಡೆಸಲಾಗಿದೆ.