Publish Date: Tue, 05 Jul 2022 (09:45 IST)
Updated Date: Tue, 05 Jul 2022 (09:47 IST)
ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದೆ.
ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ ಭವ್ಯ ಬಂಗಲೆ ಮೇಲೆ ಸೇರಿದಂತೆ ಜಮೀರ್ಗೆ ಸಂಬಂಧಿಸಿದ 5 ಕಡೆ ದಾಳಿ ನಡೆದಿದೆ.
ಈ ಹಿಂದೆ ಇಡಿ ಜಮೀರ್ ನಿವಾಸದ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಹಲವು ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿ ಆಧಾರದ ಮೇಲೆ ಎಸಿಬಿ ದಾಳಿ ನಡೆಸಿದೆ.
ಕಂಟೋನ್ಮೆಂಟ್ ರೈಲ್ವೇ ವಲಯದಲ್ಲಿರುವ ನಿವಾಸ, ಸಿಲ್ವರ್ ಓಕ್ ಅಪಾರ್ಟ್ಮೆಂಟ್ನಲ್ಲಿರುವ ಫ್ಲ್ಯಾಟ್, ಸದಾಶಿವನಗರದಲ್ಲಿರುವ ಅತಿಥಿ ಗೃಹ, ಬನಶಂಕರಿಯಲ್ಲಿರುವ ಜಿ ಕೆ ಅಸೋಸಿಯೇಟ್ಸ್ ಕಚೇರಿ, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ನಡೆದಿದ್ದು ಎಸಿಬಿ ತಂಡ ದಾಖಲೆಗಳನ್ನು ಪರಿಶೀಲಿಸುತ್ತಿದೆ.
Ramya kosira
Publish Date: Tue, 05 Jul 2022 (09:45 IST)
Updated Date: Tue, 05 Jul 2022 (09:47 IST)