Select Your Language

Notifications

webdunia
webdunia
webdunia
Saturday, 12 April 2025
webdunia

ಎಸಿಬಿಯಿಂದ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಸಮನ್ಸ್

ಎಸಿಬಿ
ಬೆಂಗಳೂರು , ಸೋಮವಾರ, 21 ಆಗಸ್ಟ್ 2017 (13:53 IST)
ಶಿವರಾಮ ಕಾರಂತ ಲೇಔಟ್ ಅಕ್ರಮ ಡಿನೋಟಿಫಿಕೆಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಿಂದ ಮತ್ತೆ ಮಾಜಿ ಸಿಎಂ ಯಡಿಯೂರಪ್ಪಗೆ ಸಮನ್ಸ್ ಜಾರಿಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಳೆದ ವಾರ ಖುದ್ದು ವಿಚಾರಣೆಗೆ ಹಾಜರಾಗುವಂತೆ ಎಸಿಬಿ ಸಮನ್ಸ್ ನೀಡಿದ್ದಾಗ ಯಡಿಯೂರಪ್ಪ 10 ದಿನಗಳ ಸಮಯಾವಕಾಶ ಕೋರಿ ಮನವಿ ಸಲ್ಲಿಸಿದ್ದರು. ಆದರೆ, ಯಡಿಯೂರಪ್ಪ ಮನವಿ ತಿರಸ್ಕರಿಸಿರುವ ಎಸಿಬಿ 3 ದಿನಗಳಲ್ಲಿ ಹಾಜರಾಗುವಂತೆ ಸಮನ್ಸ್ ನೀಡಿದೆ ಎನ್ನಲಾಗುತ್ತಿದೆ.

ಇತ್ತ,, ಎಸಿಬಿ ತನಿಖೆಗೆ ತಡೆ ಕೋರಿ ಮಾಜಿ ಸಿಎಂ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ರಾಜಕೀಯ ಉದ್ದೇಶದಿಂದ ಕೇಸು ದಾಖಲಿಸಲಾಗಿದ್ದು, ರದ್ದು ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಈ ಮಧ್ಯೆ, ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುವಂತೆ ಎಸಿಬಿ ಅಧಿಕಾರಿಗಳು ಒತ್ತಡ ಹೇರಿದ್ದರು ಎಂದು ಎಸಿಬಿ ಅಧಿಕಾರಿ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಇದನ್ನೇ ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಇವತ್ತು ಸಂಪೂರ್ಣ ಸೂರ್ಯ ಗ್ರಹಣ: ಪ್ರಾಕೃತಿಕ ವಿಕೋಪದ ಭಯ