Select Your Language

Notifications

webdunia
webdunia
webdunia
webdunia

ಎಸಿಬಿ ಬಲೆಗೆ ಮತ್ತೊಂದು ತಿಮಿಂಗಿಲ: ಅಪಾರ ಪ್ರಮಾಣದ ಆಸ್ತಿ ಪತ್ತೆ

ಎಸಿಬಿ ಬಲೆಗೆ ಮತ್ತೊಂದು ತಿಮಿಂಗಿಲ: ಅಪಾರ ಪ್ರಮಾಣದ ಆಸ್ತಿ ಪತ್ತೆ
ಮೈಸೂರು , ಶುಕ್ರವಾರ, 3 ಮಾರ್ಚ್ 2017 (14:24 IST)
ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಗ್ರಾಮೀಣ ನೀರು ಪೂರೈಕೆ ಇಲಾಖೆಯ ಸೂಪರಿಟೆಂಡೆಂಟ್ ಇಂಜಿನಿಯರ್ ರಂಗನಾಥ್ ನಾಯಕ್ ಎಂಬವರ ಮನೆಯ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
 
ರಂಗನಾಥ್ ಮನೆಯ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳಿಗೆ ಅಪಾರ ಪ್ರಮಾಣದ ಚಿನ್ನಾಭರಣ, ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿ ಹೊಂದಿರುವುದು ಬಹಿರಂಗವಾಗಿದೆ ಎಂದು ಮೂಲಗಳು ತಿಳಿಸಿವೆ.
 
ನಗರದ ಗ್ರಾಮೀಣ ಪೂರೈಕೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಂಗನಾಥ್ ಅವರ ನಿವಾಸದ ಮೇಲೆ ಮೈಸೂರಿನ ಡಿವೈಎಸ್‍ಪಿ ಗಜೇಂದ್ರಪ್ರಸಾದ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್‌ಗೆ ಕುಮಾರ್ ಬಂಗಾರಪ್ಪ ಗುಡ್‌ಬೈ: ಮಾ.9 ರಂದು ಬಿಜೆಪಿ ಸೇರ್ಪಡೆ