Select Your Language

Notifications

webdunia
webdunia
webdunia
webdunia

ಜಮೀರ್ ಅಹಮ್ಮದ್ ಮನೆ ಎಸಿಬಿ ದಾಳಿ ಭಾರಿ ಕುತೂಹಲ

ಜಮೀರ್ ಅಹಮ್ಮದ್ ಮನೆ ಎಸಿಬಿ ದಾಳಿ ಭಾರಿ ಕುತೂಹಲ
ಬೆಂಗಳೂರು , ಮಂಗಳವಾರ, 5 ಜುಲೈ 2022 (16:06 IST)
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಚಾಮರಾಜಪೇಟೆಯ ಶಾಸಕ ಜಮೀರ್‌ ಅಹಮದ್‌ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದೆ.
ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ ಬಂಗಲೆ ಮೇಲೆ ಸೇರಿದಂತೆ ಜಮೀರ್‌ಗೆ ಸಂಬಂಧಿಸಿದ 5 ಕಡೆ ದಾಳಿ ನಡೆಸಲಾಗಿದೆ
.ಇಡಿ ಜಮೀರ್‌ ನಿವಾಸದ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಹಲವು ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿ ಆಧಾರದ ಮೇಲೆ ಎಸಿಬಿ ದಾಳಿ ನಡೆಸಿದೆ. ಕಂಟೋನ್ಮೆಂಟ್ ರೈಲ್ವೇ ವಲಯದಲ್ಲಿರುವ ನಿವಾಸ, ಸಿಲ್ವರ್ ಓಕ್ ಅಪಾರ್ಟ್ಮೆಂಟ್‌ನಲ್ಲಿರುವ ಫ್ಲ್ಯಾಟ್‌, ಸದಾಶಿವನಗರದಲ್ಲಿರುವ ಅತಿಥಿ ಗೃಹ, ಬನಶಂಕರಿಯಲ್ಲಿರುವ ಜಿ ಕೆ ಅಸೋಸಿಯೇಟ್ಸ್ ಕಚೇರಿ, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ನಡೆದಿದ್ದು ಎಸಿಬಿ ತಂಡ ದಾಖಲೆಗಳನ್ನು ಪರಿಶೀಲಿಸುತ್ತಿದೆ.
 
ಇಡಿ ಅಧಿಕಾರಿಗಳ ದಾಳಿ ವೇಳೆ ಸರ್ಕಾರಿ ಯೋಜನೆಯೊಂದರಲ್ಲಿ ಬಾರಿ ಅವ್ಯವಹಾರ ಆಗಿರುವ ಸಂಬಂಧ ದಾಖಲೆ ಲಭ್ಯವಾಗಿತ್ತು. 6 ತಿಂಗಳ ಹಿಂದೆ ಇಡಿ ಈ ಬಗ್ಗೆ ವರದಿ ನೀಡಿತ್ತು. 2 ತಿಂಗಳ ಎರಡನೇ ಬಾರಿಗೆ ವರದಿ ನೀಡಿತ್ತು. ಈ ದಾಖಲೆ ಅಧಾರದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಎಸಿಬಿ ಪ್ರಕರಣ ದಾಖಲಿಸಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಸರಳ ವಾಸ್ತು ಗುರೂಜಿ ಭೀಕರ ಹತ್ಯೆ