ಆಕ್ರಮ ಆಸ್ತಿಗಳಿಕೆಯ ಆರೋಪದಡಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

Webdunia
ಗುರುವಾರ, 15 ಜುಲೈ 2021 (21:19 IST)
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ರಾಜ್ಯದ ವಿವಿಧ ಜಿಲ್ಲೆಯ 9 ಮಂದಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಗುರುವಾರ ಏಕಕಾಲದಲ್ಲಿ ದಾಳಿ ನಡೆಸಿದೆ. ಈ ವೇಳೆ ಅಪಾರ ಪ್ರಮಾಣದ ನಗದು, ಚಿನ್ನಾಭರಣ ಹಾಗೂ ದಾಖಲಾತಿ ದೊರೆತಿವೆ.
ಬೆಂಗಳೂರು, ಕೋಲಾರ, ಮಂಗಳೂರು, ಬೀದರ್, ಉಡುಪಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಹಾಗೂ ಆಪ್ತರ ಮನೆ ಸೇರಿ 40 ಕಡೆ ಬೆಳ್ಳಂಬೆಳಗ್ಗೆ 250ಕ್ಕೂ ಅಧಿಕ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದರು. ಕೆಲವು ಕಡೆ ಪರಿಶೀಲನಾ ಕಾರ್ಯ ಮುಂದುವರಿದಿದೆ.
ಮಂಗಳೂರು ಜಿಲ್ಲಾಧಿಕಾರಿ ಕಚೇರಿಯ ನಗರಾಭಿವೃದ್ಧಿ ವಿಭಾಗದ ಕಾರ್ಯಪಾಲಕ ಅಭಿಯಂತರ ಜಿ.ಶ್ರೀಧರ್, ಉಡುಪಿಯ
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಯ ಇಇ ಎಸ್ ಕೃಷ್ಣ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಮಂಡಳಿಯ ಸಿಇ  ಆರ್.ಪಿ ಕುಲಕರ್ಣಿ, ಮಾಲೂರು ನಗರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕ ಎಚ್.ಆರ್. ಕೃಷ್ಣಪ್ಪ, ಬೀದರ್  ಪಿಆರ್​ಇ ಜೆಇ ಸುರೇಶ್ ಮೋಹ್ರೆ ಸೇರಿ 9 ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಸ್ವಂತ ಕಟ್ಟಡ, ಐಶಾರಾಮಿ ಕಾರು, ಲಕ್ಷಾಂತರ ರೂ. ನಗದು, ಚಿನ್ನಾಭರಣ ಪತ್ತೆಯಾಗಿವೆ. ಇಷ್ಟಲ್ಲದೇ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಪತ್ರಗಳು ಸಿಕ್ಕಿವೆ ಎಂದು ಮೂಲಗಳು ತಿಳಿಸಿವೆ.
ಆರ್.ಪಿ.ಕುಲಕರ್ಣಿ ಎಂಬ ಅಧಿಕಾರಿಯು ಐದಾರು ಐಷಾರಾಮಿ ಅಪಾರ್ಟ್ ಮೆಂಟ್ ನಲ್ಲಿ ಫ್ಲಾಟ್ ಹೊಂದಿದ್ದರು. ಕೆಲವನ್ನು ಬಾಡಿಗೆಗೆ ನೀಡಿದ್ದರು. ಮಗನ ಹೆಸರಲ್ಲಿ ಕಂಪನಿ ಕೂಡ ತೆರೆದಿದ್ದರು. ಕೋಟ್ಯಂತರ ರೂ. ಇನ್ಶುರೆನ್ಸ್ ಕೂಡ ಹೊಂದಿರುವ ದಾಖಲೆ ಸಿಕ್ಕಿವೆ ಎನ್ನಲಾಗುತ್ತಿದೆ.
ಮಾಲೂರು ನಗರ ಯೋಜನಾ ನಿರ್ದೇಶಕ‌ ಎಚ್.ಆರ್.ಕೃಷ್ಣಪ್ಪ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆದಿದ್ದು, ದಾಖಲೆ ಹಾಗೂ ಆಸ್ತಿ‌ಪತ್ರಗಳ ಪರಿಶೀಲನೆ ನಡೆಯುತ್ತಿದೆ. ಇವರ ಸ್ವ ಗ್ರಾಮವಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ, ಮಾಲೂರು ಮನೆ ಮತ್ತು ‌ಕಚೇರಿ ಐದು ಕಡೆ ಏಕಕಾಲಕ್ಕೆ ದಾಳಿ ನಡೆದಿದ್ದು, ಅಪಾರ ನಗದು, ಚಿನ್ನಾಭರಣ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments