Select Your Language

Notifications

webdunia
webdunia
webdunia
webdunia

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು
ಚಿತ್ರದುರ್ಗ , ಸೋಮವಾರ, 17 ಡಿಸೆಂಬರ್ 2018 (07:28 IST)
ಚಿತ್ರದುರ್ಗ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಹೊರವಲಯದ ಸಮೀಪ ಕ್ಯಾದಿಗೆರೆ ಬಳಿ ನಡೆದಿದೆ.


ರಫೀಕ್ (26), ರಜೀಯಾ (50) ಮೃತ ದುರ್ದೈವಿಗಳು. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಮೃತ ರಫೀಕ್ ಮತ್ತು ರಜೀಯಾ ಸಂಬಂಧಿಕರ ವಿವಾಹ ಸಮಾರಂಭಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದರು. ಮದುವೆ ಕಾರ್ಯಕ್ರಮ ಮುಗಿಸಿ ಬಳಿಕ ಮರಡಿಹಳ್ಳಿಗೆ ವಾಪಾಸ್ಸಾಗುತ್ತಿದ್ದರು. ಈ ವೇಳೆ ಕ್ಯಾದಿಗೆರೆ ಸಮೀಪ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.


ಈ ಘಟನೆಯಲ್ಲಿ  ಎರಡೂ ಬೈಕಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಘಟನೆ ಸಂಬಂಧ ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಯುವತಿಗೆ ಹೀಯಾಳಿಸಿದ್ದಕ್ಕೆ 15 ವರ್ಷ ಜೈಲು ಶಿಕ್ಷೆಗೆ ಒಳಗಾದ ವ್ಯಕ್ತಿ. ಈ ಘಟನೆ ನಡೆದದ್ದೆಲ್ಲಿ ಗೊತ್ತಾ?