ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅತಿಹೆಚ್ಚು ಅಪಘಾತ ಸಂಭವಿಸುವ ಬ್ಲಾಕ್ ಸ್ಪಾಟ್‌ಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ.
ಲೋಕಸಭೆಗೆ ಮಾಹಿತಿ ನೀಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ದೇಶದ ವಿವಿಧ ರಾಜ್ಯಗಳಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಒಟ್ಟು 5803 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದೆ. ಆ ಪೈಕಿ ಮೂರನೇ ಸ್ಥಾನದಲ್ಲಿ ಕರ್ನಾಟಕ ಇದೆ ಎಂದಿದ್ದಾರೆ.