Select Your Language

Notifications

webdunia
webdunia
webdunia
webdunia

ಅಪಘಾತ : ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ಅಪಘಾತ : ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
ಬೆಳಗಾವಿ , ಗುರುವಾರ, 5 ಜನವರಿ 2023 (09:51 IST)
ಬೆಳಗಾವಿ : ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 6 ಯಾತ್ರಾರ್ಥಿಗಳ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ನೀಡುವುದಾಗಿ ಸಚಿವ ಗೋವಿಂದ ಕಾರಜೋಳ ಘೋಷಿಸಿದರು.

ಈ ಬಗ್ಗೆ ವೀಡಿಯೋ ಹೇಳಿಕೆ ನೀಡಿರುವ ಅವರು, ಸವದತ್ತಿಗೆ ಹೊರಟಿದ್ದಾಗ ಈ ಅವಘಡ ನಡೆದಿದ್ದು, ಮೃತ ಕುಟುಂಬದ ಜೊತೆಗಿದ್ದೇನೆ. ಸಿಎಂ ಬಸವರಾಜ ಬೊಮ್ಮಾಯಿ ಅವರೇ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸೂಚಿಸಿದರು.

ಸಿಎಂ ಬೊಮ್ಮಾಯಿ ಸೂಚನೆ ಮೇರೆಗೆ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಪ್ರಕಟಿಸಿದ್ದೇನೆ ಎಂದರು. ಇನ್ನೂ ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಡಿಎಚ್ಒ ಜೊತೆಗೂ ಮಾತನಾಡಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಸ್ಥರಿಗೆ ಅಗಲಿಕೆಯ ನೋವು ತಡೆದುಕೊಳ್ಳುವ ಶಕ್ತಿ ಸಿಗಲಿ ಎಂದು ಖೇದ ವ್ಯಕ್ತಪಡಿಸಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಶಾಕ್ !