Publish Date: Tue, 05 Dec 2017 (07:47 IST)
Updated Date: Tue, 05 Dec 2017 (07:53 IST)
ಹಾಸನ: ಹಾಸನ ಜಿಲ್ಲೆಯ ಹೆದ್ದುರ್ಗದಲ್ಲಿ ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರ ಸಾವು ಸಂಭವಿಸಿದೆ. ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ.
ಹಾಸನ ಜಿಲ್ಲೆ ಆಲೂರು ತಾಲೂಕಿನ ಹೆದ್ದುರ್ಗ ಗ್ರಾಮದಲ್ಲಿ ಬೆಳಗಿನ ಜಾವ ಕೆಎಸ್ ಆರ್ ಟಿಸಿ ವೋಲ್ವೋ ಮತ್ತು ದುರ್ಗಾಂಬಾ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂರು ಮಂದಿ ಸಾವನ್ನಪ್ಪಿದ್ದಾರೆ. ಫಾತಿಮಾ (27), ಅಬ್ದುಲ್ ಸಲಾಂ (54) ಸೇರಿ ಮೂವರ ಸಾವಾಗಿದೆ.
ಗಾಯಾಳುಗಳನ್ನು ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.