Publish Date: Sat, 17 Sep 2022 (16:57 IST)
Updated Date: Sat, 17 Sep 2022 (17:01 IST)
ಒಡಿಶಾದ ಜಾರ್ಸುಗುಡದಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಉಕ್ಕು ಮತ್ತು ವಿದ್ಯುತ್ ಸ್ಥಾವರದಲ್ಲಿ ಕೆಲಸ ನಿರ್ವಹಿಸುತ್ತಿದ್ದ 6 ಉದ್ಯೋಗಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 20 ಮಂದಿ ಗಾಯಗೊಂಡಿದ್ದಾರೆ. ಸಂಬಲ್‌ಪುರ-ಜಾರ್ಸುಗುಡ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಕಾರ್ಮಿಕರು ಪ್ಲಾಂಟ್ ಸೈಟ್‌ನಿಂದ ಜಾರ್ಸುಗುಡಾ ಪಟ್ಟಣಕ್ಕೆ ಬಸ್‌ನಲ್ಲಿ ಹಿಂತಿರುಗುತ್ತಿದ್ದರು. ಅಪಘಾತದಲ್ಲಿ ಹೆಚ್ಚಿನ ನೌಕರರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ N.ಮಹಾಪಾತ್ರ ತಿಳಿಸಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ಬುರ್ಲಾದಲ್ಲಿರುವ ವೀರ್ ಸುರೇಂದ್ರ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಸ್ಥಳಾಂತರಿಸಲಾಗಿದೆ. ಕೆಲ ಕಾರ್ಮಿಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.