Select Your Language

Notifications

webdunia
webdunia
webdunia
webdunia

ಟ್ಯಾಂಕರ್‌ಗೆ ಬೈಕ್ ಡಿಕ್ಕಿ ಹೊಡೆದು ತಾಯಿ ಮಗು ಸಾವು

ಟ್ಯಾಂಕರ್‌
ಕುಂದಾಪುರ , ಶನಿವಾರ, 7 ಮೇ 2016 (15:45 IST)
ಟ್ಯಾಂಕರ್‌‌‌ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕುಂದಾಪುರದ ತ್ರಾಸಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
 
ಶನಿವಾರ ಮುಂಜಾನೆ 8.45ರ ಸುಮಾರಿಗೆ ಈ ಘಟನೆ ನಡೆದಿದ್ದು, ಮೃತ ತಾಯಿಯನ್ನು ಅಂಬಿಕಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಅಂಬಿಕಾ ಸಹೋದರ ವಿಶ್ವನಾಥ್ ಅವರಿಗೆ ಗಾಯಗಳಾಗಿದ್ದು ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
 
ಮೂವರು ಆಸ್ಪತ್ರೆಗೆಂದು ಬೈಂದೂರಿನಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದರೆನ್ನಲಾಗಿದೆ. ಈ ವೇಳೆ ಬಸ್ಸನ್ನು ಓವರ್ ಟೇಕ್ ಮಾಡಲು ಹೋಗಿ ಎದುರಿಂದ ಬರುತ್ತಿದ್ದ ಟ್ಯಾಂಕರ್‌ಗೆ ಬೈಕ್ ಡಿಕ್ಕಿಯಾಗಿದೆ. ಆಗ ಮೂವರು ಕೆಳಕ್ಕೆ ಬಿದ್ದಿದ್ದು ಅವರ ಮೇಲೆ ಟ್ಯಾಂಕ್ ಹರಿದು ಹೋಗಿದೆ ಎಂದು ಹೇಳಲಾಗುತ್ತಿದೆ.
 
ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳುನಾಡಿಗೆ ಬಿಜೆಪಿ ಪರ್ಯಾಯ: ಪ್ರಧಾನಿ ಮೋದಿ