ಧರ್ಮಸ್ಥಳದಿಂದ ವಾಪಾಸ್ಸಾಗುತ್ತಿದ್ದ ವೇಳೆ ಅಪಘಾತ: ನಾಲ್ವರು ದುರ್ಮರಣ

sampriya
ಶುಕ್ರವಾರ, 24 ಮೇ 2024 (17:36 IST)
Photo By X
ಚಿಕ್ಕಮಗಳೂರು: ಮೆಸ್ಕಾಂ ಲಾರಿ ಮತು ಓಮ್ನಿ ವ್ಯಾನ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಚಿತ್ರದುರ್ಗದ ನಾಲ್ವರು ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೆಸ್ಕಾಂ ಬಳಿ ನಡೆದಿದೆ.

ಧರ್ಮಸ್ಥಳಕ್ಕೆ ತೆರಳಿ ಚಿತ್ರದುರ್ಗಾಕ್ಕೆ ವಾಪಾಸ್ಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಚಾರ್ಮಾಡಿ ಘಾಟಿ ಹತ್ತಿರ ಕೊಟ್ಟಿಗೆಹಾರ ದಾಟಿ ಮೂಡಿಗೆರೆ ಕಡೆಗೆ ಬರುತ್ತಿದ್ದಾಗ ಎದುರಿನಿಂದ ಬಂದ ಮೆಸ್ಕಾಂ ಲಾರಿಯು ಓಮ್ನಿ ವ್ಯಾನ್‌ಗೆ ಮೊದಲು ಡಿಕ್ಕಿ ಹೊಡೆದಿದೆ. ವ್ಯಾನಿನ ಹಿಂದೆ ಬರುತ್ತಿದ್ದ ಆಲ್ಟೊ ಕಾರು ಕೂಡ ವ್ಯಾನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. 

ಇನ್ನೂ ಅಪಘಾತದ ರಭಸಕ್ಕೆ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರು. ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರನ್ನು ಮೂಡಿಗೆರೆ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಲಾಯಿತು. ಆದರೆ, ಮಾರ್ಗಮಧ್ಯ ಅವರೂ ಕೊನೆಯುಸಿರೆಳೆದರು ಎನ್ನಲಾಗಿದೆ.

ಮೃತರನ್ನು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು ಸಮೀಪದ ಚನ್ನಪಟ್ಟಣ ಗ್ರಾಮದ ಹಂಪಯ್ಯ(65), ಪ್ರೇಮಾ(58), ಮಂಜಯ್ಯ(60) ಮತ್ತು ಪ್ರಭಾಕರ(45) ಎಂದು ಗುರುತಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments