Publish Date: Sun, 14 Oct 2018 (16:42 IST)
Updated Date: Sun, 14 Oct 2018 (16:44 IST)
ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದ ಗೋಡೌನ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ
ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿ ತಡರಾತ್ರಿ ಬೆಂಕಿ ಅನಾಹುತ ನಡೆದಿದೆ. ಗೋಕರ್ಣದ ಸಿಂಡಿಕೇಟ್ ಬ್ಯಾಂಕ್ ಬಳಿ ಇರುವ ಗಣೇಶ ಟ್ರೇಡರ್ಸ ಎಂಬ ಗೋಡೌನ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಈ ಘಟನೆ ನಡೆದಿದೆ.
ಇಲ್ಲಿನ ದೇವರ ಬಾವಿ ಗ್ರಾಮದ ಸೋಮನಾಥ ನಾಯಕ ಎಂಬ ವರಿಗೆ ಸೇರಿದ ಅಂಗಡಿ ಇದಾಗಿದೆ.
ಅಂದಾಜು ಮೂರು ಲಕ್ಷ ರೂಪಾಯಿಗಳ ಪ್ಲಾಸ್ಟಿಕ್ ವಸ್ತುಗಳು ಹಾಗೂ ಇತರೆ ವಸ್ತುಗಳುಸುಟ್ಟು ಹೋಗಿವೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಜರಾಗಿ ಬೆಂಕಿ ನಂದಿಸಿದ್ದಾರೆ.
ಶಾಟ್೯ ಸಕ್ಯೂ೯ಟ್ ನಿಂದ ಬೆಂಕಿ ಸಂಭವಿಸಿರುವ ಸಾಧ್ಯತೆಗಳಿವೆ ಎಂದು ಅಗ್ನಿಶಾಮಕದಳದ ಅಧಿಕಾರಿಗಳು ತಿಳಿಸಿದ್ದಾರೆ. ಗೋಕರ್ಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.