Publish Date: Wed, 15 Nov 2023 (18:20 IST)
Updated Date: Wed, 15 Nov 2023 (18:45 IST)
ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್ ನಲ್ಲಿ ಭಾನುವಾರ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕುಡಚಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಹಾರಾಷ್ಟ್ರದ ಸಾಂಗ್ಲಿ ಮೂಲದ ಪ್ರವೀಣ ಅರುಣ ಚೌಗಲೆ ಬಂಧಿತ ಆರೋಪಿ ಎನ್ನಲಾಗಿದ್ದು, ಈತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಆರೋಪಿ ಕೃತ್ಯ ಎಸಗಿದ ನಂತರ ಉಡುಪಿಯಿಂದ ಪರಾರಿಯಾಗಿ ಕುಡಚಿಯ ಸಂಬಂಧಿಯೊಬ್ಬರ ಮನೆಯಲ್ಲಿ ಅಡಗಿ ಕುಳಿತಿದ್ದ. ಆತನ ಮೊಬೈಲ್ ಲೋಕೇಷನ್ ಆಧರಿಸಿ ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದು ಹೆಚ್ಚಿನ, ವಿಚಾರಣೆಗೆ ಉಡುಪಿಗೆ ಕರೆ ತರಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.