Publish Date: Sat, 01 Sep 2018 (19:58 IST)
Updated Date: Sat, 01 Sep 2018 (20:07 IST)
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಚುನಾವಣೆ ಗಿಮಿಕ್ ಗಾಗಿ ಸಂಸದ ಮಲ್ಲಿಕಾರ್ಜುನ ಖರ್ಗೆ ಸಣ್ಣ ವಿಮಾನ ಹಾರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದೂರಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪನವರು, ಸಂಸದ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಕಾಮಗಾರಿಯೇ ಪೂರ್ಣಗೊಂಡಿಲ್ಲ. ರಾಜಕೀಯ ಗಿಮಿಕ್ ಗಾಗಿ ಸಣ್ಣ ವಿಮಾನ ಹಾರಾಟ ನಡೆಸಲಾಗಿದೆ. ಇದು ಖರ್ಗೆಯವರ ರಾಜಕೀಯ ಗಿಮಿಕ್ ಎಂದು ದೂರಿದರು.
ಇನ್ನು ರಾಜ್ಯದಲ್ಲಿ ರಾಜ್ಯ ಸರಕಾರವೇ ಇಲ್ಲದಂತಾಗಿದೆ. ಸಮ್ಮಿಶ್ರ ಸರಕಾರದಲ್ಲಿ ಅವರೇ ಬಡಿದಾಡಿಕೊಳ್ಳುತ್ತಿದ್ದಾರೆ. ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.