Webdunia - Bharat's app for daily news and videos

Install App

ಗರ್ಭಿಣಿ ಸಹೋದರಿಯ ಶಿರಚ್ಛೇದ ಮಾಡಿದ ಕತ್ತರಿಸಿದ ತಲೆಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿದ ಆರೋಪಿ

Webdunia
ಮಂಗಳವಾರ, 7 ಡಿಸೆಂಬರ್ 2021 (19:29 IST)
ನಮ್ಮ ಒಪ್ಪಿಗೆಯಿಲ್ಲದೆ ಮದುವೆಯಾದ ಕಾರಣಕ್ಕೆ ನಾವು ತಮ್ಮ ಮಗಳನ್ನು ಕೊಂದಿರುವುದಾಗಿ ಎಂದು ಆರೋಪಿಗಳು ನೆರೆಹೊರೆಯವರ ಹೇಳಿರುವುದಾಗಿ ಪೊಲೀಸರು ಹೇಳಿದ್ದಾರೆ.ಮಹಾರಾಷ್ಟ್ರದ (Maharashtra) ಔರಂಗಾಬಾದ್ (Aurangabad )ಜಿಲ್ಲೆಯಲ್ಲಿ ತನ್ನ ಕುಟುಂಬದ ಒಪ್ಪಿಗೆಯಿಲ್ಲದೆ ಮದುವೆಯಾದ ಕಾರಣಕ್ಕೆ 19 ವರ್ಷದ ಗರ್ಭಿಣಿಯನ್ನು ಭಾನುವಾರ ತಾಯಿಯ ಸಹಾಯದಿಂದ ಆಕೆಯ ಸಹೋದರ ಶಿರಚ್ಛೇದ ಮಾಡಿದ ಘಟನೆ ವರದಿಯಾಗಿದೆ. 38 ವರ್ಷದ ತಾಯಿ ಮತ್ತು 18 ವರ್ಷದ ಸಹೋದರ ಸಂತ್ರಸ್ತೆಯ ತಲೆಯನ್ನು ಎಳೆದುಕೊಂಡು ಹೋಗಿ ನೆರೆಹೊರೆಯವರ ಮುಂದೆ ಪ್ರದರ್ಶಿಸಿದರು ಎಂದು ಸುದ್ದಿ ಸಂಸ್ಥೆ ಎಎನ್ ವರದಿ ಮಾಡಿದೆ. ನಮ್ಮ ಒಪ್ಪಿಗೆಯಿಲ್ಲದೆ ಮದುವೆಯಾದ ಕಾರಣಕ್ಕೆ ನಾವು ತಮ್ಮ ಮಗಳನ್ನು ಕೊಂದಿರುವುದಾಗಿ ಎಂದು ಆರೋಪಿಗಳು ನೆರೆಹೊರೆಯವರ ಹೇಳಿರುವುದಾಗಿ ಪೊಲೀಸರು ಹೇಳಿದ್ದಾರೆ. ಆರು ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆಯ ತಲೆಯೊಂದಿಗೆ ಅವರು ಸೆಲ್ಫಿ ತೆಗೆದುಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಾಯಿ ಮತ್ತು ಸಹೋದರ ಮಹಿಳೆಯೊಂದಿಗೆ ರಾಜಿ ಮಾಡಿಕೊಳ್ಳುವ ನೆಪದಲ್ಲಿ ಆಕೆಯ ಮನೆಗೆ ಹೋಗಿದ್ದರು. ಪತ್ನಿ ತನ್ನ ಸಹೋದರ ಮತ್ತು ತಾಯಿ ಜತೆ ಮುಕ್ತವಾಗಿ ಮಾತನಾಡಲಿ ಎಂದು ಸಂತ್ರಸ್ತೆಯ ಪತಿ ಕೊಠಡಿಯಿಂದ ಹೊರ ಬಂದಿದ್ದರು. ಮಹಿಳೆ ಚಹಾ ಮಾಡಲು ಅಡುಗೆ ಕೋಣೆಗೆ ಹೋದಾಗ, ಹರಿತವಾದ ಆಯುಧವನ್ನು ಹಿಡಿದಿದ್ದ ಸಹೋದರ ಆಕೆಯ ಮೇಲೆ ದಾಳಿ ಮಾಡಿ ಕತ್ತು ಕೊಯ್ದಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಎಎನ್‌ಐಗೆ ತಿಳಿಸಿದ್ದಾರೆ.
 
ಮಹಿಳೆಯ ಪತಿ ರಕ್ಷಿಸಲು ಬರುವಷ್ಟರಲ್ಲಿ ಸಂತ್ರಸ್ತೆಯ ಸಹೋದರ ಆಕೆಯ ಶಿರಚ್ಛೇದ ಮಾಡಿದ್ದಾನೆ ಎಂದು ಅವರು ಹೇಳಿದರು. ಸಂತ್ರಸ್ತೆಯ ಪತಿ ತನ್ನ ಮೇಲೆಯೂ ಹಲ್ಲೆ ನಡೆಸಬಹುದೆಂಬ ಭಯದಿಂದ ಮನೆ ಬಿಟ್ಟು ಓಡಿ ಹೋಗಿದ್ದಾನೆ. ಸಂತ್ರಸ್ತೆಯ ತಾಯಿ ಮತ್ತು ಸಹೋದರ ವಿರ್ಗೋನ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದು, ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಸಂತ್ರಸ್ತೆ ಜೂನ್‌ನಲ್ಲಿ ಓಡಿಹೋಗಿ ತನ್ನ ಪತಿಯೊಂದಿಗೆ ವಾಸಿಸುತ್ತಿದ್ದಳು. ಆಕೆಯ ತಾಯಿ ಕಳೆದ ವಾರ ಆಕೆಯನ್ನು ಸಂಪರ್ಕಿಸಿ ಆಕೆಯನ್ನು ಭೇಟಿಯಾಗುವಂತೆ ಕೇಳಿಕೊಂಡಿದ್ದು ಭಾನುವಾರ ಮಗನೊಂದಿಗೆ ಮಗಳ ಮನೆಗೆ ಮರಳಿದ್ದಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments