ದಾವಣಗೆರೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ನಾಯಿಗೆ ಹೋಲಿಸಿ ಅವಮಾನ ಮಾಡಿದ ಆರೋಪದಡಿಯಲ್ಲಿ ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ದೂರು ನೀಡಿ, ಶಾಸಕರು ನನ್ನ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಉಲ್ಲೇಖಿಸಿದ್ದಾರೆ.
ಈ ದೂರನ್ನು ಆಧರಿಸಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಕಾಲಂ 79 (ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವುದು) ಹಾಗೂ 132 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಶಾಮನೂರು ಮನೆತನದ ಬಾಗಿಲಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಯಿಯ ರೀತಿಯಲ್ಲಿ ವರ್ತಿಸುತ್ತಾರೆ ಎಂದು ಶಾಸಕ ಬಿ.ಪಿ. ಹರೀಶ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದ್ದರು.